Share this news

ಅನಂತನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ದೂರದ ಅರಣ್ಯ ಪ್ರದೇಶದ ಶನಿವಾರ ಉಗ್ರರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಕೊಕರ್ನಾಗ್ ಪ್ರದೇಶದ ಅಹ್ಲಾನ್ ಗಗರ್ಮಂಡು ಅರಣ್ಯದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಶೋಧ ಕಾರ್ಯಾಚರಣೆ ಆರಂಭಸಲಾಗಿತ್ತು. ಈ ವೇಳೆ ಉಗ್ರರೊಂದಿಗೆ ಗುಂಡಿನ ಕಾಳಗ ನಡೆದಿದೆ ಎಂದು ಅವರು ಹೇಳಿದ್ದಾರೆ.

ಅರಣ್ಯದಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೇನಾ ಸಿಬ್ಬಂದಿಯನ್ನು ಗಮನಿಸಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿದೇಶಿಯರು ಎಂದು ಶಂಕಿಸಲಾದ ಭಯೋತ್ಪಾದರನ್ನು ಮಟ್ಟಹಾಕಲು ಸೇನೆಯ ವಿಶೇಷ ಪಡೆಗಳು, ಪ್ಯಾರಾಟ್ರೂಪರ್‌ಗಳು ಕಾರ್ಯಾಚರಣೆಯಲ್ಲಿದ್ದಾರೆ. ಕಳೆದ ಒಂದು ವರ್ಷದಲ್ಲಿ ಕೋಕರ್‌ನಾಗ್‌ನಲ್ಲಿ ನಡೆದ ಎನ್‌ಕೌಂಟರ್‌ ಬಿಟ್ಟರೆ, ಇದು ಎರಡನೇ ಪ್ರಮುಖ ಗುಂಡಿನ ಚಕಮಕಿಯಾಗಿದೆ.

                        

                          

                        

                          

 

`

Leave a Reply

Your email address will not be published. Required fields are marked *