Share this news

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ತೆರಿಗೆ ಬದಲಾವಣೆ ಮತ್ತು ಇತರ ನೀತಿಯ ಬದಲಾವಣೆಗಳನ್ನು ತಿಳಿಸುವ “BUZZ @ CREATIVE ” ವಿಶೇಷ ಕಾರ್ಯಗಾರ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಶನಿವಾರ ಜರುಗಿತು.
ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸಿಎ ನಿತೇಶ್ ಶೆಟ್ಟಿ ರವರು ಬಜೆಟ್ ನ ಕುರಿತು, ಸಿಎ ಚರಣ್ ರಾಜ್ ಮುಚ್ಚೂರು ರವರು ನೇರ ತೆರಿಗೆಯ ಕುರಿತು, ಸಿಎ ಸುಮಂತ್ ಬಂಗೇರ ರವರು ಪರೋಕ್ಷ ತೆರಿಗೆಯ ಕುರಿತು ಸಮಗ್ರ ಮಾಹಿತಿಗಳನ್ನು ನೀಡಿದರು.

ಕಾಲೇಜಿನ ಸಹ ಸಂಸ್ಥಾಪಕರಾದ ಅಮೃತ್ ರೈ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಕಾರ್ಕಳದ ಸ್ಥಳೀಯ ಸಣ್ಣ ಮತ್ತು ದೊಡ್ಡ ವ್ಯಾಪಾರಸ್ಥರು, ಉದ್ಯಮದಾರರು ಪಾಲ್ಗೊಂಡು ಮಾಹಿತಿಗಳನ್ನು ಪಡೆದುಕೊಂಡರು.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಇನ್ನೋರ್ವ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಬಿ, ಉಪನ್ಯಾಸಕ ವರ್ಗದವರು, ವಸತಿ ನಿಲಯ ಪಾಲಕರು, ಬೋಧಕೇತರ ಸಿಬ್ಬಂದಿಗಳು, ವಾಣಿಜ್ಯ ವಿಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಸಾರ್ವಜನಿಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಅಂತಿಮ ಘಟ್ಟದಲ್ಲಿ ಕಾರ್ಯಗಾರದ ವಿಷಯದ ಕುರಿತು ಸಂವಾದ ಕಾರ್ಯಕ್ರಮವು ನಡೆಯಿತು.
ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ್ ರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

                        

                          

                        

                          

 

`

Leave a Reply

Your email address will not be published. Required fields are marked *