Share this news

ಕಾರ್ಕಳ: ಕಳೆದ ಹಲವು ವರ್ಷಗಳಿಂದ ಪಾರ್ಶ್ವವಾಯು ಹಾಗೂ ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಏಕಾಎಕಿ ಅಸ್ವಸ್ಥಗೊಂಡು ಆಸ್ಪತೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ಹಿರ್ಗಾನ ಎಂಬಲ್ಲಿನ ನಿವಾಸಿ ಶಂಕರ(61) ಎಂಬವರು ಮೃತಪಟ್ಟ ವ್ಯಕ್ತಿ. ಅವರು ಕಳೆದ ಹಲವು ವರ್ಷದಿಂದ ಮುಂಬಯಿಯಲ್ಲಿ ಹೋಟೇಲ್ ಕೆಲಸ ಮಾಡಿಕೊಂಡಿದ್ದರು. ಅವಿವಾಹಿತರಾಗಿದ್ದ ಶಂಕರ್ ಅವರು ಇತ್ತೀಚೆಗಷ್ಟೇ ಊರಿಗೆ ಬಂದಿದ್ದು ಪಾರ್ಶ್ವವಾಯು ಹಾಗೂ ಬಿಪಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹಿರ್ಗಾನದಲ್ಲಿ ಏಕಾಂಗಿಯಾಗಿ ವಾಸವಿದ್ದರು. ಆಗಸ್ಟ್ 9 ರಂದು ರಾತ್ರಿ ಪಾರ್ಶ್ವವಾಯು ಹಾಗೂ ಬಿಪಿ ಕಾಯಿಲೆಗೆ ಮಾತ್ರೆ ತೆಗೆದುಕೊಂಡು ಮಲಗಿದ್ದವರು ಮರುದಿನ ಮುಂಜಾನೆ ತೀವೃವಾಗಿ ಅಸ್ವಸ್ಥರಾಗಿದ್ದರು. ಬಳಿಕ ಸುರೇಂದ್ರ ಎಂಬವರು ಶಂಕರ್ ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶಂಕರ್ ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಮುಂಜಾನೆ ಮೃತಪಟ್ಟಿದ್ದಾರೆ.
ಈ ಕರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

                        

                          

                        

                          

 

`

Leave a Reply

Your email address will not be published. Required fields are marked *