ಮುನಿಯಾಲು: ಪರಮ ಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳು ಶ್ರೀ ಕ್ಷೇತ್ರ ಹೊಂಬುಜ ಜೈನ ಮಠ ಇವರ ದಿವ್ಯ ಉಪಸ್ಥಿತಿಯಲ್ಲಿ ಸ್ವಾತಂತ್ರ್ಯ ಸೇನಾನಿ ಪಡುಕುಡೂರು ಬೀಡು ಶ್ರೀ ಎಂ ಡಿ ಅಧಿಕಾರಿ ಅವರ ಪುತ್ಥಳಿ ಅನಾವರಣ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಆಗಸ್ಟ್ 15 ರ ಗುರುವಾರ ಅಪರಾಹ್ನ 3:30 ರಿಂದ ಪಡುಕುಡೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಬಳಿ ನಡೆಯಲಿದೆ.
ಮಾಜಿ ಮುಖ್ಯಮಂತ್ರಿ ಡಾ. ಎಂ ವೀರಪ್ಪ ಮೊಯ್ಲಿ ಪುತ್ಥಳಿ ಅನಾವರಣಗೊಳಿಸಲಿದ್ದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟನೆ ನೆರವೇರಿಸಲಿದ್ದಾರೆ. ಶಾಸಕ ವಿ. ಸುನಿಲ್ ಕುಮಾರ್ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಲಿದ್ದು ಪ್ರತಿಮೆ ಪ್ರತಿಷ್ಠಾಪನಾ ಸಮಿತಿ ಅಧ್ಯಕ್ಷ ಜಗದೀಶ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರತಿಮೆ ಪ್ರತಿಷ್ಠಾಪನಾ ಸಮಿತಿ ತಿಳಿಸಿದೆ.















`
