ಕಾರ್ಕಳ:ಜ್ಯೋತಿ ಮಹಿಳಾ ಮಂಡಳಿ ಅಜೆಕಾರು ಇದರ ವತಿಯಿಂದ ಅಜೆಕಾರು ಜ್ಯೋತಿ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೀಝಾ ಆಟಿಡೊಂಜಿ ದಿನ ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಜ್ಯೋತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಸಗಾಯ ಹಾಗೂ ನಿವೃತ್ತ ಶಿಕ್ಷಕಿ ಸಿಸ್ಟರ್ ಸುಮಾ ಹಾಗೂ ಅಜೆಕಾರು ಸಿಎ ಬ್ಯಾಂಕಿನ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಶೋಭಾ ಎಂ ಶೆಟ್ಟಿಯವರು ಮಹಿಳಾ ಮಂಡಳಿಯ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.
ಮಹಿಳಾ ಮಂಡಳಿಯ ಅಧ್ಯಕ್ಷೆ ಯಶೋದಾ ಎಸ್.ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.
ಬಳಿಕ ತಿಂಡಿ ತಿನಿಸುಗಳ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಪ್ರತಿಮಾ ಶೆಟ್ಟಿ ಪ್ರಾರ್ಥಿಸಿ, ವೀಣಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸುಲೋಚನಾ ವಂದಿಸಿದರು.ವಸಂತಿ ಭಟ್, ಲತಾ ಶೆಟ್ಟಿ, ಸುನೀತಾ ಶೆಟ್ಟಿ , ಕ್ರಿಸ್ತಿನಾ, ವಿನಯಾಕ್ಷಿ, ಅನಿತಾ ಶೆಟ್ಟಿ, ಸಂಕ್ರಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು
`