Share this news

ಕಾರ್ಕಳ: ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕನ ಸ್ಕೂಟರ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಸುಧೀರ ಎಂಬಾತ ಆಗಸ್ಟ್.15ರಂದು ಮುಂಜಾನೆ ಮಣಿಪಾಲದಲ್ಲಿ ಕೆಲಸ ಮುಗಿಸಿ ಎರ್ಲಪಾಡಿ ಗ್ರಾಮದ ಜಾರ್ಕಳ ಅನ್ನಪೂರ್ಣೇಶ್ವರಿ ಬಾರ್ ಬಳಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿದ ಸ್ಕೂಟಿ ಮರಕ್ಕೆ ಡಿಕ್ಕಿಯಾಗಿ ಸವಾರನ ತಲೆಗೆ ಗಂಭೀರ ಗಾಯವಾಗಿತ್ತು.

ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಅಜ್ಜರಕಾಡು ಆಸ್ಪತ್ರೆಗೆ ಕರೆದೊಯ್ದು, ಮತ್ತೆ ಅಲ್ಲಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದು ನಂತರ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                        

                          

                        

                          

 

`

Leave a Reply

Your email address will not be published. Required fields are marked *