ಉಡುಪಿ ಆ 17: ಮುಡಾ ಸೈಟ್ ಹಂಚಿಕೆ ಹಗರಣದ ರೂವಾರಿ ಸಿದ್ಧರಾಮಯ್ಯನವರೇ ಆಗಿದ್ದು, ನೈತಿಕ ಹೊಣೆಹೊತ್ತು ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಶಾಸಕ ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ ಭಂಡತನವನ್ನು ಬಿಟ್ಟು ರಾಜೀನಾಮೆ ನೀಡಬೇಕು, ಅವರ ವಿರುದ್ಧ ಕೇಳಿಬಂದಿರುವ ಭ್ರಷ್ಠಾಚಾರದ ಆರೋಪದ ತನಿಖೆಯನ್ನು ಎದುರಿಸಬೇಕು.ಅಂದು ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ಸಾಧನೆಗಳನ್ನು ಹೇಳಿಸಿದಾಗ ರಾಜ್ಯಪಾಲರು ನಿಷ್ಪಕ್ಷಪಾತಿಯಾಗಿದ್ದು ಒಳ್ಳೆಯವರು ಎಂದಿದ್ದ ಕಾಂಗ್ರೆಸ್ ನಾಯಕರಿಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬಳಿಕ ರಾಜ್ಯಪಾಲರನ್ನು ಟೀಕಿಸುತ್ತಿರುವುದು ನೈತಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಸಿದ್ದರಾಮಯ್ಯನವರ ವಿರುದ್ಧ ಕೇಳಿಬಂದಿರುವ ಗಂಭೀರ ಭ್ರಷ್ಟಾಚಾರ ಆರೋಪದ ತನಿಖೆಯವರೆಗೆ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕು, ತನಿಖೆಯಲ್ಲಿ ಆರೋಪಮುಕ್ತರಾದರೆ ಮತ್ತೆ ನೀವು ಮುಖ್ಯಮಂತ್ರಿಯಾಗಿ ಮುಂದುವರಿಯಲಿ ನಮ್ಮದೇನು ಆಕ್ಷೇಪಣೆಯಿಲ್ಲ ಎಂದು ಸುನಿಲ್ ಒತ್ತಾಯಿಸಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಆಡಳಿತ ಪಕ್ಷದವರೇ ಬೀದಿಗಿಳಿದು ಹೋರಾಟ ನಡೆಸುತ್ತಾರೆ ಎಂದಾದರೆ ಕಾಂಗ್ರೆಸ್ ನಿಲುವು ಏನು ಎನ್ನುವುದು ಸ್ಪಷ್ಟವಾಗಿದೆ.ಅಂದು ಸಾಕಷ್ಟು ಸಂದರ್ಭಗಳಲ್ಲಿ ಬೇರೆಬೇರೆ ರಾಜ್ಯದ ಸಿಎಂಗಳ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದರು. ಅಂತಹ ಸಂದಭದಲ್ಲಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿ ಆರೋಪಮುಕ್ತರಾದ ಬಳಿಕ ಮತ್ತೆ ಸಿಎಂ ಆಗಿ ಮುಂದುವರಿದ ಸಾಕಷ್ಟು ಉದಾಹರಣೆಗಳಿವೆ. ಆದ್ದರಿಂದ ಸಿದ್ದರಾಮಯ್ಯನವರು ತಕ್ಷಣವೇ ರಾಜೀನಾಮೆ ನೀಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಸುನಿಲ್ ಕುಮಾರ್ ಎಚ್ಚರಿಸಿದ್ದಾರೆ
























`
