Share this news

ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜಯಂತಿ ನಗರದ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿ ಆನಂದ ಎಂಬವರು ಮಂಗಳೂರಿನ ಅಡ್ಡೂರು ಎಂಬಲ್ಲಿ ಸರಕಾರಿ ಹೊಳೆಯಿಂದ ಶಫೀಕ್ ಅಡ್ಡೂರು ಮತ್ತು ಶರೀಫ್ ಹೊಸ್ಮಾರು ಎಂಬವರು ಕಳವು ಮಾಡಿ ನೀಡಿದ ಮರಳನ್ನು ಭಾನುವಾರ ಪರವಾನಿಗೆ ಇಲ್ಲದೇ ಕಾರ್ಕಳಕ್ಕೆ ಸಾಗಿಸುತ್ತಿದ್ದ ವೇಳೆ ಕುಕ್ಕುಂದೂರು ಗ್ರಾಮದ ಜಯಂತಿ ನಗರ ಸರ್ವಜ್ಜ ಸರ್ಕಲ್ ಬಳಿ ಪುಲ್ಕೇರಿ ಬೈಪಾಸ್ ಕಡೆಯಿಂದ ಜೋಡು ರಸ್ತೆಯ ಕಡೆಗೆ ಸಾಗಾಟ ಮಾಡುತ್ತಿದ್ದಾಗ ಕಾರ್ಕಳ ನಗರ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

                        

                          

                        

                          

 

`

Leave a Reply

Your email address will not be published. Required fields are marked *