ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಹುಣಸೆಕಟ್ಟೆ ಎಂಬಲ್ಲಿ ಅಂದರ್ ಬಾಹರ್ ಆಡುತ್ತಿದ್ದ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆಗಸ್ಟ್.18 ಭಾನುವಾರದಂದು ನಿಟ್ಟೆ ಗ್ರಾಮದ ಹುಣಸೆಕಟ್ಟೆ ಎಂಬಲ್ಲಿರುವ ಹಳೆಯ ಕ್ರಶರ್ ಬಳಿ ಸದಾನಂದ, ಗಣೇಶ್, ಪ್ರಥಮ್,ಜಯರಾಜ್, ಸೂರ್ಯ ಮತ್ತು ರಾಜ ಎಂಬವರು ಅಂದರ್-ಬಾಹರ್ ಎಂಬ ಜುಗಾರಿ ಆಟವನ್ನು ಆಡುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆಟವಾಡುತ್ತಿದ್ದ 6 ಮಂದಿಯನ್ನು ವಶಪಡಿಸಿಕೊಂಡಿದ್ದಾರೆ. ಹಾಗೂ ಆಟಕ್ಕೆ ಬಳಸಿದ್ದ 10,200 ರೂ. ನಗದು, ಇಸ್ಪೀಟ್ ಎಲೆಗಳು, ದ್ವಿಚಕ್ರ ವಾಹನ ಸೇರಿದಂತೆ ಇತರ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
























`
