Share this news

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ್ದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ 10 ದಿನಗಳ ಬಿಗ್ ರಿಲೀಫ್ ನೀಡಿದೆ. ಪ್ರಾಸಿಕ್ಯೂಶನ್’ಗೆ ತಡೆನೀಡುವಂತೆ ಹಾಗೂ ಪ್ರಕರಣ ರದ್ದುಗೊಳಿಸಲು ಕೋರಿ ಹೈಕೋರ್ಟ್ ಗೆ ಸಿದ್ದರಾಮಯ್ಯ ಪರ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಅಂತಿಮವಾಗಿ ವಿಚಾರಣೆಯನ್ನು 29ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದರು.
ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ವಿಚಾರಣೆ ಆರಂಭಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಪರವಾಗಿ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸುತ್ತಿದ್ದು, ಇನ್ನೂ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ ತುಷಾರ ಮೆಹ್ತಾ ವಾದ ಮಂಡಿಸಿದರು. ಈ ವೇಳೆ ತುಷಾರ್ ಮೆಹ್ತಾ ಅವರು ನಾಳೆ ಅರ್ಜಿಯ ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದಾಗ, ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ಇದೆ. ಮಧ್ಯಂತರ ಆದೇಶ ಬೇಕಿರುವುದರಿಂದ ಇಂದೇ ವಿಚಾರಣೆ ನಡೆಸಬೇಕು. ರಾಜ್ಯಪಾಲರ ಕಚೇರಿಗೆ ಅರ್ಜಿಯ ಪ್ರತಿ ನೀಡಿದ ಮಾತ್ರಕ್ಕೆ ಅವರ ವಾದ ಕೇಳಬೇಕಿಲ್ಲ ಎಂದು ಸಿಎಂ ಪರ ಅಭಿಷೇಕ್ ಮನುಸಿಂಗ್ವಿ ವಾದಿಸಿದರು.

ರಾಜಪಾಲರ ಶೋಕಾಸ್ ನೋಟಿಸ್ ಗೆ ಉತ್ತರ ನೀಡಲಾಗಿತ್ತು. ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ದೂರುಗಳು ದುರುದ್ದೇಶಪೂರ್ವಕ. ಶೋಕಾಸ್ ನೋಟಿಸ್ ಗೆ ಕ್ಯಾಬಿನೆಟ್ ಸಲಹೆ ಕೂಡ ಕೊಟ್ಟಿದೆ ಕ್ಯಾಬಿನೆಟ್ ಸಲಹೆ ಪರಿಗಣಿಸದೇ ರಾಜ್ಯಪಾಲರು 100 ಪುಟಗಳ ಕ್ಯಾಬಿನೆಟ್ ಸಲಹೆಗೆ ಎರಡು ಪುಟಗಳ ಉತ್ತರ ಕೊಟ್ಟಿದ್ದಾರೆ ಎಂದು ಅಭಿಷೇಕ್ ಮನುಸಿಂಗ್ವಿ ವಾದಿಸಿದರು.

ಸರ್ಕಾರವನ್ನು ಅಸ್ಥಿರಗೊಳಿಸಲು ಇಂತಹ ಕ್ರಮವಾಗುತ್ತಿದೆ. ರಾಜೀನಾಮೆ ಪಡೆಯಲು ಈಗ ರಾಷ್ಟ್ರಪತಿ ಆಳ್ವಿಕೆ ಅಗತ್ಯವಿಲ್ಲ. ಕೇವಲ ಇಂತಹ ದೂರುಗಳ ಮೂಲಕ ಉದ್ದೇಶ ಈಡೇರುತ್ತಿದೆ. ಸರ್ಕಾರಿ ಸೇವಕನಾಗಿ ಸಿಎಂ ಮುಡಾ ಕುರಿತು ಯಾವುದೇ ಶಿಫಾರಸ್ಸು ಮಾಡಿ ಎಂದು ವಾದಿಸಿದರು.
ಹೊಸ ಬಿಎನ್ಎಸ್ ಕಾಯಿದೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ತಮ್ಮ ಕರ್ತವ್ಯದ ಭಾಗವಾಗಿ ಸಿಎಂ ನಿರ್ಧಾರ ಕೈಗೊಂಡಿಲ್ಲ. ಆದರು ವಿವೇಚನಾ ರಹಿತವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಕ್ಯಾಬಿನೆಟ್ ಸಲಹೆಯನ್ನು ತಿರಸ್ಕರಿಸಿ ಆದೇಶ ನೀಡುವ ಹಾಗಿಲ್ಲ. ಇದಕ್ಕೆ ವಿವರಣೆಯಾಗಿ ಮಧ್ಯಪ್ರದೇಶದ ತೀರ್ಪನ್ನು ಕೂಡ ಮನುಸಿಂಗ್ವಿ ಉಲ್ಲೇಖಿಸಿದರು.ನಾಳೆ ಸೆಷನ್ಸ್ ಕೋರ್ಟ್ ನಲ್ಲಿ ನಡೆಯಬೇಕಿದ್ದ ವಿಚಾರಣೆಗೆ ತಡೆನೀಡಿ ಹೈಕೋರ್ಟ್ ನ್ಯಾಯಪೀಠ ಆದೇಶಿಸಿದೆ
ಒಟ್ಟಿನಲ್ಲಿ ಮುಡಾ ಹಗರಣದಲ್ಲಿ ಸಿಲುಕಿದ್ದ ಸಿದ್ದರಾಮಯ್ಯಗೆ ಸಧ್ಯಕ್ಕೆ 10 ದಿನಗಳ ಕಾಲ ರಿಲೀಫ್ ಸಿಕ್ಕಂತಾಗಿದೆ

                        

                          

                        

                          

 

`

Leave a Reply

Your email address will not be published. Required fields are marked *