ಕಾರ್ಕಳ: ಕಾರ್ಕಳ ಕಸಬಾ ಗ್ರಾಮದ ಕಾಬೆಟ್ಟು ಜಂಕ್ಷನ್ ದ್ವಾರದ ಬಳಿ ಮಂಗಳವಾರ ಮಧ್ಯಾಹ್ನ ಪಂಚಮ್ ಎಂಬಾತ ಜೋಡುರಸ್ತೆ ಕಡೆಯಿಂದ ಪುಲ್ಕೇರಿ ಕಡೆಗೆ ತಮ್ಮ ಬೈಕಿನಲ್ಲಿ ಹೋಗುತ್ತಿದ್ದಾಗ ಅತ್ತೂರು ಚರ್ಚ್ ಕಡೆಯಿಂದ ಕಾಬೆಟ್ಟು ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿಯಾಗಿದೆ.
ಅಪಘಾತದ ಪರಿಣಾಮ ಪಂಚಮ್ ಬೈಕ್ ಸಹಿತ ರಸ್ತೆಗೆ ಬಿದ್ದು ಗಂಭಿರವಾಗಿ ಗಾಯಗೊಂಡಿದ್ದಾರೆ. ಗಾಯಾಳುವಿಗೆ ಕಾರ್ಕಳ ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ ಗೆ ದಾಖಲಿಸಲಾಗಿದೆ.
ಇನ್ನೋರ್ವ ಬೈಕ್ ಸವಾರನಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
























`
