ಕಾರ್ಕಳ, ಆ23:ಭಾರತದ ಕೃಷಿ ಬಹುತ್ವದ ಕೃಷಿ. ರೈತ ದೇಶದ ಬೆನ್ನೆಲುಬು. ಸಾವಯವ ಕೃಷಿಯನ್ನು ಬೆಂಬಲಿಸಿದರೆ ಮಾತ್ರ ಮಾನವ
ಸಂಕುಲ ಆರೋಗ್ಯಪೂರ್ಣ ಜೀವನವನ್ನು ನಡೆಸಲು ಸಾಧ್ಯ ಎಂದು ಡಾ. ನರೇಂದ್ರ ರೈ ದೇರ್ಲ ಅಭಿಪ್ರಾಯಪಟ್ಟಿದ್ದಾರೆ.
ಒಂದು ಬೊಗಸೆ
ಹಸಿರು ಎಂಬ ಶೀರ್ಷಿಕೆಯಡಿಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ನಡೆದ
“ಕ್ರಿಯೇಟಿವ್ ಸ್ಫೂರ್ತಿ ಮಾತು* ಎನ್ನುವ ಸಂಚಿಕೆಯ 6 ನೇ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್ ಎಲ್, ಬೋಧಕ ವರ್ಗದವರು, ವಸತಿ ನಿಲಯ ಪಾಲಕರು, ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಬೋಧಕೇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಕನ್ನಡ ಭಾಷಾ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ರವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
`