Share this news

ಬೈಂದೂರು ತಾಲೂಕಿನ ನಾವುಂದ ಜಂಕ್ಷನ್ ಪ್ಲಾಝಾ ಗ್ರೋ ಕಾಂಪ್ಲೆಕ್ಸ್ ನಲ್ಲಿರುವ ಪ್ರತಿಮಾ ಆಚಾರ್ಯ ಎಂಬವರಿಗೆ ಸಂಬಂಧಿಸಿದ ಫ್ಯಾನ್ಸಿ ಸ್ಟೋರ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಕರಕಲಾದ ಘಟನೆ ಇಂದು ನಡೆದಿದೆ.

ಪ್ರತಿಮಾ ಅವರು ಟೈಲರಿಂಗ್ ಜೊತೆಯಲ್ಲಿ ಬಟ್ಟೆ ಹಾಗೂ ಸ್ಟೇಷನರಿಯೊಂದಿಗೆ ಅಂಗಡಿ ನಡೆಸಿಕೊಂಡಿದ್ದರು. ಅಂಗಡಿಯಲ್ಲಿ ಹೊಲಿಗೆ ಯಂತ್ರ, ಫ್ರಿಡ್ಜ್, ಬಟ್ಟೆ, ಪುಸ್ತಕಗಳು, ಸ್ಟೇಷನರಿ ವಸ್ತುಗಳು, ಕಪಾಟು, ಫ್ಯಾನ್ಸಿ ವಸ್ತುಗಳು ಸಹಿತ ಸುಮಾರು 5‌ ಸಾವಿರ ರೂ. ನಗದಿತ್ತು.

ಅಂಗಡಿ ಮಾಲಕಿ ಪ್ರತಿಮಾ ವಿಜೇಂದ್ರ ಅವರು ಮಧ್ಯಾಹ್ನ ಅಂಗಡಿಯಲ್ಲಿದ್ದು ನಂತರ ದೇವಸ್ಥಾನಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ. ಸುಮಾರು 12.45ರ ಹೊತ್ತಿಗೆ ಹೊಗೆ ತುಂಬಿಕೊಂಡದ್ದನ್ನು ಆಸುಪಾಸಿನ ಅಂಗಡಿಯವರು ಹಾಗೂ ಸ್ಥಳಿಯರು ಗಮನಿಸಿ ಅಗ್ನಿಶಾಮಕ ಹಾಗೂ ಪೊಲೀಸರಿಗೆ ತಿಳಿಸಿದ್ದರು.

ಅಗ್ನಿ ಶಾಮಕದವರು ಆಗಮಿಸಿದ ವೇಳೆ ಬೆಂಕಿಯಿಂದ ಸಂಪೂರ್ಣ ಸುಟ್ಟು ಹೋಗಿದ್ದು ಅಂದಾಜು 3 ಲಕ್ಷಕ್ಕೂ ಮಿಕ್ಕಿ ನಷ್ಟ ಆಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

                        

                          

                        

                          

 

`

Leave a Reply

Your email address will not be published. Required fields are marked *