Share this news
ಕಾರ್ಕಳ : ಕಾರ್ಕಳ ತಾಲೂಕಿನ ಅಯ್ಯಪ್ಪ ನಗರ ಬಳಿ ಹಾಡಿಯಲ್ಲಿ ಯುವತಿಗೆ ಮತ್ತು ಬರುವ ಔಷಧಿ ನೀಡಿ ಗ್ಯಾಂಗ್ ರೇಪ್ ನಡೆಸಿರುವ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಲ್ವರು ಮುಸ್ಲಿಂ ಯುವಕರಿಂ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಅಮಾನವೀಯ  ಘಟನೆ ಸಮಾಜದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. 
ಕಾರ್ಕಳ ಅಯ್ಯಪ್ಪ ನಗರ ಬಳಿ ಹಾಡಿಯಲ್ಲಿ ಯುವತಿಗೆ ಪಾನೀಯದಲ್ಲಿ ಮತ್ತು ಬರುವ ಔಷಧಿ ನೀಡಿ ಗ್ಯಾಂಗ್ ರೇಪ್ ಮಾಡಲಾಗಿದೆ ಎನ್ನಲಾಗಿದ್ದು, ನಾಲ್ವರು ಯುವಕರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.ಈ ಕುರಿತ ಸಂಪೂರ್ಣ ಮಾಹಿತಿ ಪೊಲೀಸರ ಸಮಗ್ರ ತನಿಖೆಯಿಂದ ತಿಳಿದುಬರಬೇಕಿದೆ.
ನಾಲ್ವರಲ್ಲಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದು ಬಂಧಿತ ಆರೋಪಿಯನ್ನು ಅಲ್ತಾಫ್ ಎಂದು ಗುರುತಿಸಲಾಗಿದೆ.ಇತರ ಮೂವರು ಪರಾರಿಯಾಗಿದ್ದು,ಈ  ಗ್ಯಾಂಗ್ ರೇಪ್ ಆರೋಪಿಗಳ  ಸಂಪೂರ್ಣ ಮಾಹಿತಿ ಪೊಲೀಸ್ ತನಿಖೆಯ ಬಳಿಕವೇ ಲಭ್ಯವಾಗಬೇಕಿದೆ.
ವಿಷಯ ತಿಳಿದ ಹಿಂದೂಪರ ಸಂಘಟನೆ ಕಾರ್ಯಕರ್ತರು ಪೊಲೀಸ್ ಠಾಣೆ ಹಾಗೂ ಆಸ್ಪತ್ರೆಯಲ್ಲಿ ಜಮಾಯಿಸಿ ಈ ಕೃತ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                        

                          

                        

                          

 

`

Leave a Reply

Your email address will not be published. Required fields are marked *