Share this news

ಬೆಂಗಳೂರು: ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸುಳಿವು ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆಗೆ ನಿರ್ಧರಿಸಲಾಗಿದ್ದು, ಶೀಘ್ರವೇ ಸಭೆ ನಡೆಸಿ ಈ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೆಎಸ್ ಆರ್ ಟಿಸಿ ಸಿಬ್ಬಂದಿ ವೇತನ, ಡೀಸೆಲ್, ಬಿಡಿ ಭಾಗಗಳ ಬೆಲೆ ಹೆಚ್ಚಳವಾಗಿದ್ದು, ಆರ್ಥಿಕ ಹೊರೆ ಹೆಚ್ಚಾಗಿದೆ. ಹೀಗಾಗಿ ಬಸ್ ಟಿಕೆಟ್ ದರ ಶೇಕಡ 15 ರಿಂದ 20 ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಪ್ರಸ್ತಾವನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಗಮನಕ್ಕೆ ತರಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದ್ದು, ಶೀಘ್ರವೇ ಬಸ್ ಟಿಕೆಟ್ ದರ ಏರಿಕೆ ಕುರಿತು ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.

                        

                          

                        

                          

 

`

Leave a Reply

Your email address will not be published. Required fields are marked *