ಕಾರ್ಕಳ : ಹಿಂದೂ ಯುವತಿಯ ಮೇಲೆ ನಡೆದ ಅತ್ಯಾಚಾರ ಅತ್ಯಂತ ಖಂಡನೀಯ. ಈ ಘಟನೆಯಿಂದ ಇಡೀ ಸಮಾಜ ತಲೆ ತಗ್ಗಿಸುವಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಆಗ್ರಹಿಸುತ್ತೇವೆ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ಕಾರ್ಕಳ, ಶಾಂತಿ, ಸೌಹಾರ್ದತೆ, ಸಹಬಾಳ್ವೆ ಮತ್ತು ಸಹೋದರತೆಗೆ ಹೆಸರಾಗಿರುವ ಊರು. ನಮ್ಮ ಊರಿನಲ್ಲಿ ಇಂತಹ ಘಟನೆ ನಡೆದಿದೆ ಎಂದರೆ ನಂಬಲು ಅಸಾಧ್ಯ. ಈ ಘಟನೆಯಿಂದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾದರೆ ಮಾತ್ರ ಇಂತಹ ಪ್ರಕರಣ ಮರುಕಳಿಸದಂತೆ ತಡೆಯಬಹುದು ಎಂದರು.
ಇತ್ತೀಚಿನ ದಿನಗಳಲ್ಲಿ ಯವಕರು ಮಾದಕ ವಸ್ತುಗಳಿಗೆ ಬಲಿಯಾಗಿ ಇಂತಹ ಪೈಶಾಚಿಕ ಕೃತ್ಯಗಳಲ್ಲಿ ತೊಡಗುವುದು ಕಂಡು ಬರುತ್ತಿದೆ. ಪೋಲೀಸ್ ಇಲಾಖೆ ಅಂಥವರನ್ನು ಪತ್ತೆ ಹಚ್ಚಿ ಮಟ್ಟ ಹಾಕುವಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಸಂತ್ರಸ್ತೆಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಅವರ ಕುಟುಂಬದ ಜೊತೆ ಕಾಂಗ್ರೆಸ್ ಪಕ್ಷ ನಿಲ್ಲಲಿದೆ ಎಂದು ಶುಭದ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























`
