ಕಾರ್ಕಳ: ಬೆಳ್ಮಣ್ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಕಲಂಬಾಡಿಪದವು ಶಾಲೆಯ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದಿದೆ.
ಟ್ರೋಫಿಯೊಂದಿಗೆ ಆಗಮಿಸಿದ ನಮ್ಮ ಶಾಲಾ ವಿದ್ಯಾರ್ಥಿನಿಯರ ತಂಡವನ್ನು ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಎಸ್ ಡಿಎಂಸಿ xs ಅಧ್ಯಕ್ಷೆ ಸಂಗೀತ ಆಚಾರ್ಯ, ಉಪಾಧ್ಯಕ್ಷರಾದ ಜಯಂತ್ ನಾಯಕ್, ಮಾಜಿ ಎಸ್‌ಡಿಎಂಸಿ ಅಧ್ಯಕ್ಷರಾದ ದಯಾನಂದ ನಾಯಕ್ ,ಉಪಾಧ್ಯಕ್ಷರಾದ ಆಶಾಮೂಲ್ಯ, ಎಸ್ ಡಿ ಎಂಸಿ ಸದಸ್ಯರಾದ ರಾಜೇಶ್ ಆಚಾರ್ಯ , ದಿನೇಶ್ ಆಚಾರ್ಯ,ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್ ಬಿ ಉಪಸ್ಥಿತರಿದ್ದರು. ಶಿಕ್ಷಕರಾದ ವಿಜಯಲಕ್ಷ್ಮಿ ಸ್ವಾಗತಿಸಿದರು ಆಶಾ ವಂದಿಸಿದರು. ನಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು
`