ಬೆಂಗಳೂರು: ಮೈಸೂರು ಜಿಲ್ಲೆ ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ನೀಡಿರುವ ಜಾಮೀನು ರದ್ದು ಕೋರಿ ಎಸ್ ಐ ಟಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರಿಂದ ಎಚ್ಡಿ ರೇವಣ್ಣಗೆ ಮತ್ತಷ್ಟು ರಿಲೀಫ್ ಸಿಕ್ಕಂತಾಗಿದೆ.
ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಎಸ್ಐಟಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಆದರೆ ಹೈಕೋರ್ಟ್ ಇಂದು (ಆಗಸ್ಟ್ 28) ಎಸ್ಐಟಿ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಅಲ್ಲದೇ ಇದೇ ಪ್ರಕರಣದ ಆರೋಪಿಗಳಾದ ಸತೀಶ್ ಬಾಬು, ಮಧುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿಗೆ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿದ್ದ ಪೀಠ ಆದೇಶ ಹೊರಡಿಸಿದೆ.
`