Share this news

ಪುತ್ತೂರು : ಬನ್ನೂರು ಕರ್ಮಲದಲ್ಲಿರುವ ಪೊಲೀಸ್ ವಸತಿ ಗೃಹದ ಬಳಿಯೇ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಮನೆಯಲ್ಲಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿರುವ ಘಟನೆ ಆ.29 ರ ಸಂಜೆ ನಡೆದಿದೆ.

ಬನ್ನೂರು ಕರ್ಮಲ ಪೊಲೀಸ್ ವಸತಿಗೃಹ ರಸ್ತೆಯ ಬಲಮುರಿ ವಿದ್ಯಾಗಣಪತಿ ದೇವಸ್ಥಾನದ ಬಳಿ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಸಾರ್ವಜನಿಕ‌ರ ದೂರಿನ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಪರಿಶೀಲನೆ ವೇಳೆ ಓರ್ವ ಮೈಸೂರು ಮೂಲದ ಯುವತಿ ಮತ್ತು ಮಹಿಳೆ ಇದ್ದು ಅವರನ್ನು ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.

ಪೊಲೀಸರ ದಾಳಿ ಕುರಿತು ತಿಳಿಯುತ್ತಿದ್ದಂತೆ ಮನೆಯಲ್ಲಿದ್ದ ಯುವಕರು ಕಂಪೌಂಡ್ ಹಾರಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪುತ್ತೂರಿನ ಮಹಿಳಾ ಠಾಣೆಯಲ್ಲಿ ಪೊಲೀಸರು ತನಿಖೆ ಮುಂದುವರೆದಿದೆ.

                        

                          

                        

                          

 

`

Leave a Reply

Your email address will not be published. Required fields are marked *