ಮಂಗಳೂರು: ಸುರತ್ಕಲ್ ನ NITK ಟೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಎಂಡಬ್ಲ್ಯು ಕಾರು ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಗಿದ ಘಟನೆ ನಡೆದಿದೆ.
ಬೆಂಕಿ ಹೊತ್ತಿಕೊಂಡ ತಕ್ಷಣವೇ ಚಾಲಕ ಹಾಗೂ ಪ್ರಯಾಣಿಕರು ಕಾರಿನಿಂದ ಹೊರಬಂದಿದ್ದರಿಂದ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ತಿಳಿದುಬಂದಿದೆ.
ಕಾರು ಉಡುಪಿಯಿಂದ ಮಂಗಳೂರಿನ ಕಡೆಗೆ ಹೆದ್ದಾರಿಯಲ್ಲಿ ಚಲಿಸುತ್ತಿರುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಮಂಗಳೂರು ಉತ್ತರ ಸಂಚಾರ ಪೊಲೀಸ್ ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯನಡೆದಿದೆ.
ಆದರೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಯಾವ ಮೂಲದಿಂದ ಬೆಂಕಿ ತಗುಲಿದೆ ಎಂಬುದನ್ನು ತನಿಖೆ ನಡೆಸುತ್ತಿದ್ದಾರೆ.















