ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ಹಾಗೂ ಹೊಸ್ಮಾರು ಬಲ್ಯೋಟ್ಟು ಗುರುಕೃಪಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಲಕರ ವಿಭಾಗದಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಹೆಗ್ಡೆ ಮತ್ತು ವಿಜೇತ ವಿದ್ಯಾರ್ಥಿಗಳನ್ನು ಮುಖ್ಯ ಶಿಕ್ಷಕಿ ಶಕುಂತಲಾ ಹಾಗೂ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.