ಹೆಬ್ರಿ: ಸರ್ಕಾರಿ ಪದವಿಪೂರ್ವ ಕಾಲೇಜು ಹೆಬ್ರಿ ಪ್ರೌಢಶಾಲಾ ವಿಭಾಗ ಇಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ಸೆ.9 ರಂದು ನಡೆಯಿತು.
ಹೆಬ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ತಾರನಾಥ್ ಬಂಗೇರ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸಿದಾಗ ಮನಸ್ಸು ಮತ್ತು ದೇಹ ಸದೃಢಗೊಳ್ಳುತ್ತದೆ. ಶಾಲಾ ವಿದ್ಯಾರ್ಥಿಗಳಲ್ಲಿ ಕೀಡಾ ಮನೋಭಾವನೆಯನ್ನು ಬೆಳೆಸಲು ಇಂತಹ ಸ್ಪರ್ಧೆಗಳು ಅತ್ಯಗತ್ಯ ಎಂದರು.
ದ್ದರು. ಚಾರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ದಿನೇಶ್ ಶೆಟ್ಟಿ, ಎಸ್ ಡಿಎಂಸಿ ಅಧ್ಯಕ್ಷರಾದ ವಿಜಯೇಂದ್ರ ಶೆಟ್ಟಿ, ಚೈತನ್ಯ ಯುವ ವೃಂದದ ಶಂಕರ್ ಸೇರಿಗಾರ್, ಕಾರ್ಕಳ ದೈಹಿಕ ಶಿಕ್ಷಣ ಪರಿವೀಕ್ಷಣ ಅಧಿಕಾರಿ ರವಿಚಂದ್ರ ಕಾರಂತ್, ಪ್ರಾಂಶುಪಾಲರಾದ ಉಮೇಶ್, ಉಪ ಪ್ರಾಂಶುಪಾಲರಾದ ದಿವಾಕರ್ ಮರಕಾಲ ಎಸ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿಜಯಶೆಟ್ಟಿ, ಕಾರ್ಕಳ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಎಸ್ ಡಿ ಎಂಸಿ ಸದಸ್ಯರಾದ ವಿಷ್ಣುಮೂರ್ತಿ ಉಪಸ್ಥಿತರಿದ್ದರು.
ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಎಚ್ ಪಿ ಮಂಜೇಗೌಡ ಸ್ವಾಗತಿಸಿ ದಿವಾಕರ್ ಮರಕಾಲ ಎಸ್ ವಂದಿಸಿದರು. ಗಣಿತ ಅಧ್ಯಾಪಕರಾದ ವೆಂಕಟರಮಣ ಕಲ್ಕೂರ್ ಕಾರ್ಯಕ್ರಮ ನಿರೂಪಿಸಿದರು.
ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕೆ.ಪಿಎಸ್.ಮುನಿಯಾಲು, ದ್ವಿತೀಯ ಸ್ಥಾನವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹೆಬ್ರಿ ಪಡೆಯಿತು.
ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗುರುಕೃಪಾ ಬಲ್ಯೊಟ್ಟು, ದ್ವಿತೀಯ ಸ್ಥಾನವನ್ನು, ಸುಂದರ ಪುರಾಣಿಕ್ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಪಡೆಯಿತು.