ಮಂಗಳೂರು: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದಾಗ ರಿಕ್ಷಾ ಡಿಕ್ಕಿ ಹೊಡೆದು ರಿಕ್ಷಾದಡಿ ಬಿದ್ದಿದ್ದ ತನ್ನ ತಾಯಿಯನ್ನು ಕಾಪಾಡಿದ ಬಾಲಕಿ ವೈಭವಿಯನ್ನು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಬಾಲಕಿಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಎಲ್ಲರೂ ಕೊಂಡಾಡಿದರು. ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿ ಶ್ಲಾಘಿಸಿದ್ದರು