ಕಾರ್ಕಳ : ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ 2024ನೇ ಸಾಲಿನ ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ ಕಾರ್ಕಳ ಜ್ಞಾನಸುಧಾ ಆಂಗ್ಲ ಪ್ರೌಢಶಾಲೆಯಲ್ಲಿ ಸೆ. 11ರಂದು ನಡೆಯಿತು.
ಕ್ರೈಸ್ಟಕಿಂಗ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀನಾರಾಯಣ್ ಕಾರ್ಯಕ್ರಮ ಉದ್ಘಾಟಿಸಿದರು.
ಪಂದ್ಯಾಟದಲ್ಲಿ ತಾಲೂಕಿನ ಎಲ್ಲಾ ಪ್ರೌಡಶಾಲೆಗಳ ಬಾಲಕಿಯರ 27 ತಂಡ ಹಾಗೂ ಬಾಲಕರ 21 ತಂಡ ಗಳು ಭಾಗವಹಿಸಿದ್ದವು.
ಪಂದ್ಯಾಟದಲ್ಲಿ ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದ ಸ್ಪರ್ಧೆ ಗೆ ಆಯ್ಕೆಯಾಗಿರುತ್ತಾರೆ.
ವಿಜೇತ ತಂಡಕ್ಕೆ ಶಾಲಾ ಸಂಚಾಲಕರಾದ ವಂದನೀಯ ಗುರುಗಳು ಅಮ್ರಿತ್ ಮಾರ್ತೀಸ್, ಶಾಲಾ ಮುಕ್ಯೋಪಾಧ್ಯಯಿನಿ ಸಿಸ್ಟೆರ್ ಪ್ರೆಸಿಲ್ಲ ಪುಟಡೋ,
ಶಾಲಾ ದೈಹಿಕ ಶಿಕ್ಷಕ ರಾಜೇಶ್ ಹಾಗೂ ಶಿಕ್ಷಕ -ಶಿಕ್ಷಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.