Share this news

ಉಡುಪಿ: ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಪರಿಶೀಲಿಸುವ ಸಲುವಾಗಿ ಸರ್ವೇ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹೇಳಿದರು.

ಉಡುಪಿ ಜಿಲ್ಲಾಧಿಕಾರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಿಲ್ಲೆಯಲ್ಲಿ ಸದ್ಯ ಶೇ.85ರಷ್ಟು ಬಿಪಿಎಲ್‌ ಪಡಿತರ ಕಾರ್ಡ್‌ ಗಳಿದ್ದು, 1.97 ಲಕ್ಷ ಕುಟುಂಬಗಳು ಬಿಪಿಎಲ್‌ ಕಾರ್ಡ್‌ ಹೊಂದಿವೆ. ಇದರಲ್ಲಿ ಅನರ್ಹರೂ ಕಾರ್ಡ್‌ ಪಡೆದಿರುವ ಸಾಧ್ಯತೆ ಇದೆ. 6 ತಿಂಗಳಿಂದ ಯಾರು ಪಡಿತರ ತೆಗೆದುಕೊಂಡಿಲ್ಲವೋ ಅವರ ಕಾರ್ಡ್‌ಗಳನ್ನು ಆರಂಭದಲ್ಲಿ ಮುಟ್ಟುಗೋಲು ಹಾಕುತ್ತೇವೆ. ಹಾಗೆಯೇ 1.20 ಲಕ್ಷಕ್ಕಿಂತ ಅಧಿಕ ಆದಾಯ ಇರುವ ಮತ್ತು ಮನೆಯ ಪರಿಸ್ಥಿತಿಯನ್ನು ಅವಲೋಕಿಸಿಯೇ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಲಾಗುತ್ತದೆ ಎಂದರು.

ಸದ್ಯ ಈ ಪ್ರಕ್ರಿಯೆ ಆರಂಭವಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಬಿಪಿಎಲ್‌ ಕಾರ್ಡ್‌ ಅರ್ಹತೆಗಿಂತ ಅಧಿಕ ಆದಾಯ ಇದ್ದಲ್ಲಿ ಕಾರ್ಡ್‌ ವಾಪಸ್‌ ಸಲ್ಲಿಸಲು ಅವಕಾಶವಿದೆ. ಸರಕಾರಿ ಅಧಿಕಾರಿ, ನೌಕರರು ದಂಡ ಪಾವತಿಸಬೇಕಾಗುತ್ತದೆ. ಉಳಿದವರು ದಂಡ ಪಾವತಿಸುವ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ ಎಂದು ತಿಳಿಸಿದರು.

 

 

 

 

    

                        

                          

                        

                       

Leave a Reply

Your email address will not be published. Required fields are marked *