Share this news

ನವದೆಹಲಿ: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾದ ಲಡ್ಡುಗಳ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನೀಡಿರುವ ಹೇಳಿಕೆ ತೀವ್ರ ಸಂಚಲನ ಮೂಡಿಸಿದೆ. ಹಿಂದಿನ ವೈಎಸ್​ಆರ್​ ಕಾಂಗ್ರೆಸ್​ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಿತ್ತು ಎಂದು ಅವರು ಆರೋಪಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಟಿಡಿಪಿ ನೇತೃತ್ವದ ಸರ್ಕಾರ ಜನಸೇನಾ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿತ್ತು. ಬುಧವಾರ ನಡೆದ ಎನ್ ಡಿಎ ಪಕ್ಷದ ಸಭೆಯಲ್ಲಿ ಚಂದ್ರಬಾಬು ನಾಯ್ಡು ಅವರು ಹಿಂದಿನ ಸರ್ಕಾರದ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದಾರೆ. ಆದರೆ, ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಆರೋಪವನ್ನು ಕಟುವಾಗಿ ತಳ್ಳಿಹಾಕಿದೆ.

ವೈಎಸ್ಆರ್ ಕಾಂಗ್ರೆಸ್ ಪಕ್ಷವು ಈ ಆರೋಪಗಳನ್ನು ನಿರಾಕರಿಸಿದೆ ಮತ್ತು ಅವುಗಳನ್ನು ಆಧಾರರಹಿತ ಮತ್ತು ದುರುದ್ದೇಶಪೂರಿತ ಎಂದು ಕರೆದಿದೆ. ತಿರುಮಲ ದೇವಸ್ಥಾನದ ಪಾವಿತ್ರ್ಯತೆ ಮತ್ತು ಆಡಳಿತದ ಬಗ್ಗೆ ಈ ನಿಲುವು ಚರ್ಚೆಯನ್ನು ಹುಟ್ಟುಹಾಕಿದೆ. ಕಳೆದ 5 ವರ್ಷಗಳಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರು ತಿರುಮಲದ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಸಿಎಂ ನಾಯ್ಡು ಹೇಳಿದ್ದಾರೆ.

ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಿದ್ದರು, ದೇವಸ್ಥಾನದ ಪಾವಿತ್ರ್ಯತೆ ಕಾಪಾಡಲು ಪ್ರಯತ್ನಿಸುತ್ತಿದ್ದೇವೆ, ದೇವಾಲಯದ ಸಂಪ್ರದಾಯಗಳನ್ನು ಮರುಸ್ಥಾಪಿಸುವುದರ ಜೊತೆಗೆ, ದೇವಾಲಯವನ್ನು ಉಳಿಸಿಕೊಳ್ಳಲು ಸರ್ಕಾರವು ಪ್ರಯತ್ನಿಸುತ್ತಿದೆ ಎಂದರು.

                       in 

                          

                        

                       

Leave a Reply

Your email address will not be published. Required fields are marked *