ಕುಂದಾಪುರ : ಕುಂದಾಪುರ ತಾಲೂಕಿನ ತೆಕ್ಕಟ್ಟೆ ರಾ.ಹೆ. 66ರ ಪೇಟೆ ಸರ್ಕಲ್ ನಲ್ಲಿ ಹೆಮ್ಮಾಡಿ ಖಾಸಗಿ ಪಿಯು ಕಾಲೇಜಿನ ಶಾಲಾ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಶಾಲಾ ವಾಹನ ಕೋಟದಿಂದ ಹೆಮ್ಮಾಡಿ ಕಡೆಗೆ ಹೋಗುತ್ತಿದ್ದ ಸಂದರ್ಭ ದ್ವಿಚಕ್ರ ವಾಹನವೊಂದು ಏಕಾಏಕಿ ಅಡ್ಡಬಂದ ಪರಿಣಾಮ ಅಪಘಾತವನ್ನು ತಪ್ಪಿಸಲು ಹೋಗಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಗುದ್ದಿದ್ದಾನೆ.
ಅಪಘಾತದ ಪರಿಣಾಮ ಚಾಲಕನ ತಲೆ, ಕಣ್ಣು ಹಾಗೂ ಕೈಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದೆ. ವಾಹನದಲ್ಲಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರಿಗೂ ಕೂಡಾ ಸಣ್ಣಪುಟ್ಟ ಗಾಯಗಳಾಗಿದೆ.
ಗಾಯಾಳುಗಳನ್ನು ಸ್ಥಳೀಯರು ತತ್ಕ್ಷಣವೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ . ಘಟನಾ ಸ್ಥಳಕ್ಕೆ ಕೋಟ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.









in 






