Share this news

ದಕ್ಷಿಣ ಕನ್ನಡ : ಅಪ್ರಾಪ್ತೆಯ ಮೇಲೆ‌ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಎಂಬವರನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದ ಕಾರಣ ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಸೆ.19ರ ಮುಂಜಾನೆ ಪ್ರಸಾದ್ ಪಂಗಣ್ಣಾಯರನ್ನು ಅವರ ಮನೆಯಲ್ಲಿ ಬಂಧಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಪ್ರಸಾದ್ ಪಾಂಗಣ್ಣಾಯರವರು ಕಾಣಿಯೂರು ಸಮೀಪದ ಬೆಳಂದೂರು ನಿವಾಸಿಯಾಗಿದ್ದು, ದಕ್ಷಿಣ ಕನ್ನಡದ ಹಲವು ಕಡೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಾರೆ ಎಂದು ತಿಳಿದುಬಂದಿದೆ.

                       in 

                          

                        

                       

Leave a Reply

Your email address will not be published. Required fields are marked *