Share this news

ಕುಂದಾಪುರ : ಕೋಟೇಶ್ವರದ ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಗೆ ಬಿದ್ದು ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ.

ಹಂಗಳೂರಿನ ಗೌರೀಶ್‌ ಬಿ.ಆರ್‌ (25) ಮೃತಪಟ್ಟವರು ಎಂದು ತಿಳಿದುಬಂದಿದೆ. ಗೌರೀಶ ಬಿ.ಆರ್. ಎಂಬಿಬಿಎಸ್‌ ವಿದ್ಯಾಭ್ಯಾಸ ಮುಗಿಸಿ ಮುಂದಿನ ವಿದ್ಯಾಬ್ಯಾಸಕ್ಕಾಗಿ ಮನೆಯಲ್ಲಿದ್ದು, ಬುಧವಾರ ಸಂಜೆ ಮನೆಯಿಂದ ಸಹನಾ ಹಾಲ್ ಹತ್ತಿರ ಇರುವ ಈಜು ಕೊಳದಲ್ಲಿ ಈಜಲು ಹೋಗುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದು ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ನಾಪತ್ತೆಯಾಗಿದ್ದ ಗೌರೀಶ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಕೋಟೇಶ್ವರ ದೇವಸ್ಥಾನದ ಕೆರೆ ಸಮೀಪ ಬುಧವಾರ ತಡರಾತ್ರಿ ಬ್ಯಾಗ್‌, ಮೊಬೈಲ್‌ ಫೋನ್‌, ಚಪ್ಪಲಿ ಕಂಡುಬಂದಿತ್ತು. ಅಂದು ಸಂಜೆ 5.30ರಿಂದ ರಾತ್ರಿ 11 ಗಂಟೆಯ ನಡುವೆ ಕೆರೆಗೆ ಕಾಲುಜಾರಿ ಬಿದ್ದಿರಬಹುದು ಎಂದು ಕುಟುಂಬಿಕರು ಶಂಕಿಸಿದ್ದಾರೆ. ಗುರುವಾರ ಬೆಳಗ್ಗೆ ಕೆರೆಯಲ್ಲಿ ಹುಡುಕಿದಾಗ ಮೃತದೇಹ ಪತ್ತೆಯಾಗಿದೆ.

ಮೃತಪಟ್ಟ ಯುವಕ ಆತ್ಮಹತ್ಯೆಯೋ..ಕಾಲು ಜಾರಿ ಬಿದ್ದನೋ. ಈ ಕುರಿತು ಮಾಹಿತಿ ತಿಳಿದು ಬರಬೇಕಾಗಿದೆ.

ಈ ಬಗ್ಗೆ ಮೃತ ಯುವಕನ ಸಹೋದರ ವಿಘ್ನೇಶ್‌ ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                       in 

                          

                        

                       

Leave a Reply

Your email address will not be published. Required fields are marked *