ಹೆಬ್ರಿ : ಹೆಬ್ರಿ ತಾಲೂಕಿನ ಮುನಿಯಾಲಿನಲ್ಲಿ ಇಂದು ಮುಂಜಾನೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಹೆಬ್ರಿ- ಕಾರ್ಕಳ ಮಾರ್ಗವಾಗಿ ಗದಗದಿಂದ ಪುತ್ತೂರಿಗೆ ಹೋಗುತ್ತಿದ್ದ ಮಾರುತಿ ವ್ಯಾಗನರ್ ಕಾರು ಒಂದು ರಸ್ತೆಯ ಬದಿಯ ಮಣ್ಣಿನ ಜಿಡ್ಡೆಗೆ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್ ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದು, ಕಾರು ಜಖಂಗೊಂಡಿದೆ.
ಚಿತ್ರ ಕೃಪೆ : ಪ್ರಮೋದ್ ಚಂದ್ರ ಪೈ ಮುನಿಯಾಲು







in 
