Share this news

ಬೆಂಗಳೂರು: ತಿರುಪತಿ ತಿರುಮಲ ದೇಗುಲದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ದೇಶದೆಲ್ಲೆಡೆ ಸಂಚಲನ ಸೃಷ್ಟಿಸಿದೆ.

ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯದ ಮುಜರಾಯಿ ವ್ಯಾಪ್ತಿಯ ಎಲ್ಲಾ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪವನ್ನೇ ಬಳಸುವಂತೆ ಸುತ್ತೋಲೆ ಹೊರಡಿಸಿತ್ತು. ಇದೀಗ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವಂತೆ ಆದೇಶಿಸಿದೆ.

ಕರ್ನಾಟಕದ ಮುಜರಾಯಿ ದೇಗುಲಗಳಲ್ಲಿ ಭಕ್ತರಿಗೆ ನೀಡುವ ಪ್ರಸಾದ ಸುರಕ್ಷಿತವಾಗಿದೆ. ಆಹಾರವೂ ಗುಣಮಟ್ಟದಿಂದ ಕೂಡಿದೆ. ಆದರೂ ಈ ಬಗ್ಗೆ ಅನುಮಾನಗಳು ಇರಬಾರದು ಎನ್ನುವ ನಿಟ್ಟಿನಲ್ಲಿ ಎಲ್ಲ ದೇಗುಲಗಳ ಪ್ರಸಾದವನ್ನು ಪರೀಕ್ಷೆಗೆ ಒಳಪಡಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಮುಜರಾಯಿ ಇಲಾಖೆ ಅಡಿಯಲ್ಲಿ ರಾಜ್ಯದಲ್ಲಿ 34,000 ಕ್ಕೂ ಹೆಚ್ಚು ದೇವಾಲಯಗಳಿವೆ. ಅವುಗಳಲ್ಲಿ, 205 ದೇಗುಲಗಳ ವಾರ್ಷಿಕ ಆದಾಯ 25 ಲಕ್ಷ ರೂ.ಗಿಂತ ಹೆಚ್ಚಿದ್ದು, ವರ್ಗ-ಎ ಎಂದು ವರ್ಗೀಕರಿಸಲ್ಪಟ್ಟಿವೆ. 193 ದೇಗುಲಗಳನ್ನು 5 ಲಕ್ಷದಿಂದ ರೂ. 25 ಆದಾಯದೊಂದಿಗೆ ವರ್ಗ-ಬಿ ಎಂದು ಗುರುತಿಸಲಾಗಿದೆ. ಉಳಿದವುಗಳನ್ನು 5 ಲಕ್ಷ ರೂ. ಆದಾಯದೊಂದಿಗೆ ವರ್ಗ-ಸಿ ಎಂದು ವರ್ಗೀಕರಿಸಲಾಗಿದೆ. ಇವುಗಳಲ್ಲಿ ಹೆಚ್ಚಿನ ದೇವಾಲಯಗಳು ಭಕ್ತರಿಗೆ ಪ್ರಸಾದವನ್ನು ನೀಡುತ್ತವೆ.

                       in 

Leave a Reply

Your email address will not be published. Required fields are marked *