Share this news

ಉಡುಪಿ : ಇಂದು  ಬೆಳಗ್ಗೆ ಉಡುಪಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಯ ಕಟ್ಟಡಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಇಬ್ಬರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಉಡುಪಿಯ ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನ ಬಳಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಕಟ್ಟಡದ ನವೀಕರಣ ಕಾಮಗಾರಿ ನಡೆಯುತ್ತಿದ್ದುದರಿಂದ ಅದೃಷ್ಟವಶಾತ್ ರೋಗಿಗಳು ಇರಲಿಲ್ಲ. ಬೆಳಿಗ್ಗೆ ದೈನಂದಿನ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಬೆಂಕಿ ಅವಘಡವನ್ನು ಗಮನಿಸಿ ಮಾಹಿತಿ ನೀಡಿದ್ದಾರೆ. ಪ್ರಾರಂಭದಲ್ಲಿ ಕಟ್ಟಡದ ಮೇಲ್ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

 ತಕ್ಷಣವೇ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ‌ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

                       in 

Leave a Reply

Your email address will not be published. Required fields are marked *