ನವದೆಹಲಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಬಾರಿ ನೀಡಲಾಗುವ ಕಂತಿನ ಹಣ ಅಕ್ಟೋಬರ್ 5ಕ್ಕೆ ಬರಲಿದೆ. ಈವರೆಗೆ 17 ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಅ. 5ಕ್ಕೆ 18ನೇ ಕಂತಿನ ಹಣ ರಿಲೀಸ್ ಆಗಲಿದೆ.
ಈ ಮಾಹಿತಿಯನ್ನು ಪಿಎಂ ಕಿಸಾನ್ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಇದಕ್ಕೂ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 2024 ರಲ್ಲಿ 17 ನೇ ಕಂತನ್ನು ಬಿಡುಗಡೆ ಮಾಡಿದ್ದರು. ಪ್ರಧಾನಿ ಮೋದಿ ಅವರು ಜೂನ್ 18, 2024 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 9.26 ಕೋಟಿ ರೈತರಿಗೆ 17 ನೇ ಕಂತಾಗಿ 21,000 ಕೋಟಿ ರೂ. 16ನೇ ಕಂತು ಈ ವರ್ಷದ ಫೆಬ್ರವರಿಯಲ್ಲಿ ಬಿಡುಗಡೆಯಾಗಿದೆ.
2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಎಲ್ಲಾ ನೊಂದಾಯಿತ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ಹಣವನ್ನು ಸರ್ಕಾರ ಸಹಾಯಧನವಾಗಿ ನೀಡುತ್ತದೆ. ಪ್ರತೀ ಕಂತಿನಲ್ಲೂ ರೈತರಿಗೆ 2,000 ರೂ ಸಿಗುತ್ತದೆ. ಸಣ್ಣ ರೈತರಿಗೆ ವ್ಯವಸಾಯಕ್ಕೆ ಸಹಾಯಾಗಲೆಂದು ಸರ್ಕಾರ ಈ ಸ್ಕೀಮ್ ಆರಂಭಿಸಿದೆ. ಸರ್ಕಾರಿ ಸೇವೆಯಲ್ಲಿರುವವರು, ವೈದ್ಯ, ವಕೀಲ ಇತ್ಯಾದಿ ವೃತ್ತಿಪರ ಕೆಲಸದವರು, ಶಾಸಕರು, ಸಂಸದರು ಇತ್ಯಾದಿ ಜನಪ್ರತಿನಿಧಿಗಳು, ತೆರಿಗೆ ಪಾವತಿಸುತ್ತಿರುವವರು ಹಾಗೂ ಅವರು ಇರುವ ಕುಟುಂಬದವರು ಪಿಎಂ ಕಿಸಾನ್ ಯೋಜನೆ ಪಡೆಯಲು ಅರ್ಹತೆ ಹೊಂದಿರುವುದಿಲ್ಲ. ಇಲ್ಲಿಯವರೆಗೆ ಸುಮಾರು 10 ಕೋಟಿ ರೈತರು ಸ್ಕೀಮ್ಗೆ ನೊಂದಾಯಿಸಿಕೊಂಡಿದ್ದಾರೆ.
2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಇಲ್ಲಿಯವರೆಗೆ 17 ಕಂತುಗಳ ಹಣವನ್ನು ಫಲಾನುಭವಿ ರೈತರು ಪಡೆದಿದ್ದಾರೆ.
in