Share this news

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಶಂಕಿತ ಉಗ್ರನನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿ. ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಇವನಾಗಿದ್ದು, ಆಗಸ್ಟ್ ನಲ್ಲಿ ಗುವಾಹಟಿಯಲ್ಲಿಯೇ ಐದು IED ಬಾಂಬ್ ಇಟ್ಟು, ಕುಟುಂಬ ಸಹಿತ ಬೆಂಗಳೂರಿಗೆ ಬಂದು ವಾಸವಾಗಿದ್ದ. ಬಳಿಕ ಶಂಕಿತ ಖಾಸಗಿ ಕಂಪನಿಯಲ್ಲಿ ಗೌತಮ್ ಎನ್ನುವ ಹೆಸರಲ್ಲಿ ಸೆಕ್ಯೂರಿಟಿಯಾಗಿ ಕೆಲಸಕ್ಕೆ ಸೇರಿದ್ದನು. ಇದೀಗ ಆನೇಕಲ್ ತಾಲೂಕಿನ ಜಿಗಣಿಯಲ್ಲಿದ್ದ ಶಂಕಿತ ಉಗ್ರನನ್ನು ನಿನ್ನೆ(ಸೆ.25) ಅಸ್ಸಾಂನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರಿನ ಜಿಗಣಿಯಲ್ಲಿ ವಾಸವಿದ್ದ ಈ ಶಂಕಿತ ಉಗ್ರ, ಇಲ್ಲಿಯೂ ಒಂದಷ್ಟು ಪ್ಲ್ಯಾನ್ ಗಳನ್ನು ನಡೆಸುತ್ತಿದ್ದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಸದ್ಯ ಈತನನ್ನು ಬಂಧಿಸಿರುವ ಅಧಿಕಾರಿಗಳು, ಬಂಧಿತನಿAದ ಮೊಬೈಲ್ ಮತ್ತು ಒಂದಷ್ಟು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಆತನನ್ನು ಅಸ್ಸಾಂಗೆ ಕರೆದೊಯ್ಯಲಾಗಿದೆ.

ಕಳೆದ ಆಗಸ್ಟ್. 31 ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಹಿಜ್ಬ್ ಉಲ್ ತಹ್ರೀರ್ ಭಯೋತ್ಪಾದಕ ಸಂಘಟನೆಯ ಅಜೀಜ್ ಅಹ್ಮದ್ ಎಂಬ ಶಂಕಿತ ಉಗ್ರನನ್ನು ಬಂಧಿಸಿದ್ದರು. ಇತ ಶುಕ್ರವಾರ ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪಾರಾರಿಯಾಗುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದ ಎನ್‌ಐಎ ಆತನನ್ನು ಬಂಧಿಸಿದ್ದರು. ಇದೀಗ ಮತ್ತೋರ್ವ ಶಂಕಿತ ಉಗ್ರನನ್ನು ಅರೆಸ್ಟ್ ಮಾಡಲಾಗಿದೆ.

                       in 

Leave a Reply

Your email address will not be published. Required fields are marked *