Share this news

ಉಡುಪಿ: ಹೊಳೆಯಲ್ಲಿ ಸುಮಾರು 70 ಅಡಿ ದೂರದವರಗೆ ಈಜಿಕೊಂಡು ಹೋಗಿ ತುಂಡಾದ ವಿದ್ಯುತ್ ತಂತಿಯನ್ನು ದುರಸ್ತಿಗೊಳಿಸಿ ಮನೆಗೆ ವಿದ್ಯುತ್ ಸಂಪರ್ಕ ನೀಡಿದ ಹೆಬ್ರಿ ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಶಿವಪುರ ಗ್ರಾಮದ ಉಪ್ಪಳ ಮೂರು ಸಾಲು ಹೊಳೆಯ ಮಧ್ಯದಲ್ಲಿ ಹಾದುಹೋದ ವಿದ್ಯುತ್ ತಂತಿ ತುಂಡಾಗಿ ಹಲವಾರು ದಿನಗಳು ಕಳೆದಿತ್ತು. ವಿಪರೀತ ಮಳೆಯಿಂದಾಗಿ ದುರಸ್ತಿ ಮಾಡಲಾಗದೆ ಹಾಗೆ ಉಳಿದಿತ್ತು.

ಈ ಪರಿಸರದ ಜನ ವಿದ್ಯುತ್ ಮೋಟರ್‌ ಗಳನ್ನು ಬಳಸಲಾಗದೆ ಸಮಸ್ಯೆಯನ್ನು ಎದುರಿಸುತ್ತಿದ್ದರು. ಈ ವಿಷಯ ತಿಳಿದ ದಾವಣಗೆರೆ ಚೆನ್ನಗಿರಿ ಮೂಲದ ಹೆಬ್ರಿ ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಹಾಗೂ ಅರೆಕಾಲಿಕ ಸಿಬ್ಬಂದಿ ಸುಧೀರ್ ಸಹಾಯದೊಂದಿಗೆ ಕೇವಲ ಇಬ್ಬರೇ ತೆರಳಿ ಸಮಸ್ಯೆಯನ್ನು ಬಗೆಹರಿಸಿದ್ದಾರೆ.

ವಿದ್ಯುತ್ ತಂತಿಯ ಒಂದು ತುದಿಗೆ ಹಗ್ಗವನ್ನು ಕಟ್ಟಿ ಸುಮಾರು 70 ಅಡಿ ದೂರಕ್ಕೆ ಈಜಾಡಿಕೊಂಡು ಹೋಗಿ ತುಂಡಾಗಿದ್ದ ವಿದ್ಯುತ್ ತಂತಿಯನ್ನು ದುರಸ್ತಿಪಡಿಸಿ ಪರಿಸರದ ಮನೆಗಳಿಗೆ ವಿದ್ಯುತ್ ಸಂಪರ್ಕವನ್ನು ನೀಡಿದ್ದಾರೆ.

ಪ್ರಮೋದ್ ಅವರು ಕಳೆದ 2 ವರ್ಷದ ಹಿಂದೆ ಹೆಬ್ರಿ ಮೆಸ್ಕಾಂ ಗೆ ಸಿಬ್ಬಂದಿಯಾಗಿ ನೇಮಕಾತಿಗೊಂಡಿದ್ದು ಮೊದಲಿಂದಲೇ ಈಜನ್ನು ಕರಗತ ಮಾಡಿಕೊಂಡಿದ್ದರು. ಪ್ರಮೋದ್ ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಹೊಳೆ ದಾಟಿ ಬಂದ ಸಿಬ್ಬಂದಿಯ ವೀಡಿಯೋ ಸೆರೆ ಹಿಡಿದ ಸ್ಥಳೀಯರು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

                       in 

Leave a Reply

Your email address will not be published. Required fields are marked *