ಕಾರ್ಕಳ: ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ಮೂಲಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಗುರುವಾರ ಮೌನ ಪ್ರತಿಭಟನೆ ನಡೆಯಿತು.
ಕಂದಾಯ ಇಲಾಖೆಯಿಂದ ನಿರಂತರವಾಗಿ ಸರ್ಕಾರದಿಂದ ಅಭಿವೃದ್ದಿಪಡಿಸಿರುವ ಹಕುಪತ್ರ, ಆಧಾರ್ ಸೀಡ್, ಲ್ಯಾಂಡ್ ಬೀಟ್, ಬಗರ್ ಹುಕುಂ, ಭೂಮಿ, ಬೆಳೆ ಸಮೀಕ್ಷೆ, ಕೃಷಿ ಗಣತಿ ಇನ್ನೂ ಹಲವು ವೆಬ್/ಮೊಬೈಲ್ ತಂತ್ರಾAಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹಾಗೂ ಸಿ-ವೃಂದದ ನೌಕರರ ಹತ್ತುಪಟ್ಟು ಕೆಲಸಗಳ ಜವಾಬ್ದಾರಿಯನ್ನು ವಹಿಸುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ನೀಡಬೇಕು.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಛೇರಿ, ಉತ್ತಮ ಗುಣಮಟ್ಟದ ಟೇಬಲ್, ಕುರ್ಚಿ,ಅಲ್ಮೆರಾ, ಮೊಬೈಲ್ ಫೋನ್, ಸಿಯುಜಿಸಿಮ್ ಮತ್ತುಡೇಟಾ ಗೂಗಲ್ ಕ್ರೋಮ್, ಬುಕ್/ ಲ್ಯಾಪ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಸೇರಿದಂತೆ ಸೇವೆಗೆ ಸಂಬAಧಿಸಿದ ಇನ್ನಿತರ ವಿಷಯಗಳನ್ನು ಕಲ್ಪಿಸಬೇಕು. ಕೆಲಸದ ಅವಧಿಯ ಮುನ್ನ ಹಾಗೂ ಮುಕ್ತಾಯದ ನಂತರ ನಡೆಸಲಾಗುವ ಎಲ್ಲಾ ಬಗೆಯ ವರ್ಚುವಲ್ ಸಭೆಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು, ಈ ಹಿಂದಿನAತೆ ಆಹಾರ ಇಲಾಖೆಯ ಆಹಾರ ನಿರೀಕ್ಷಕ ಹುದ್ದೆಗೆ ಪದೋನ್ನತಿ, ಇತರೆ ಇಲಾಖೆಗಳ ಹಲವಾರು ಕೆಲಸಗಳನ್ನು ನಿರ್ವಹಿಸುವ ವೇಲೆ ಅವಘಡ ಉಂಟಾದಲ್ಲಿ 3000 ರೂ. ಆಪತ್ತಿನ ಭತ್ಯೆ, ಪ್ರಯಾಣ ಭತ್ಯೆಯನ್ನು 500 ರಿಂದ 3000 ರೂ. ಗಳಿಗೆ ಹೆಚ್ಚಿಸಬೇಕು, ,ಮನೆಹಾನಿ ಪ್ರಕರಣಗಳ ಜವಾಬ್ದಾರಿಯಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈಬಿಡಬೇಕು. ವಂಶವೃಕ್ಷ/ ಜಾತಿಪ್ರಮಾಣಪತ್ರ/ ಇತರೆ ಪ್ರಮಾಣ ಪತ್ರಗಳ ವಿತರಣೆ ವಿಚಾರವಾಗಿ ಕಂದಾಯ ಇಲಾಖೆ ಮತ್ತು ಗ್ರಾಮ ಆಡಳಿತ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸದೆ ಅರ್ಜಿದಾರರನ್ನೇ ಹೊಣೆಗಾರರಾಗಿಸಬೇಕು, ಕರ್ತವ್ಯ ನಿರ್ವಹಿಸುವಾಗ ಜೀವಹಾನಿ ಆಗುವ ಗ್ರಾಮ ಆಡಳಿತ ಅಧಿಕಾರಿಗಳ ಕುಟುಂಬಕ್ಕೆ 25 ಲಕ್ಷ ರೂ. ಗಳ ಪರಿಹಾರ ಘೋಷಿಸಬೇಕು,ಎಲ್ಲಾನೌಕರರಿಗೆ ಒಂದು ತಿಂಗಳ ವೇತನವನ್ನು ಹೆಚ್ಚುವರಿ ಮಾಡಿ ಆದೇಶಿಸಬೇಕು, ಬೆಳೆಸಮೀಕ್ಷೆ ಹಾಗೂ ಬೆಳೆಹಾನಿ ಪರಿಹಾರದ ಕೆಲಸವನ್ನು ಕೃಷಿ/ತೋಟಗಾರಿಗೆ ಇಲಾಖೆಗೆನಿರ್ವಹಿಸುವಂತೆ ಆದೇಶಿಸಬೇಕು.
ಪ್ರೋಟೋಕಾಲ್ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೈಬಿಡುವಂತೆ ಆದೇಶ ನೀಡಬೇಕು, ದಫ್ತರ್ ಹಾಗೂ ಜಮಾಬಂದಿಯನ್ನು ರದ್ದುಪಡಿಸಬೇಕು, ಅನ್ಯ ಇಲಾಖೆಯ ಕೆಲಸ ನಿರ್ವಹಿಸದಂತೆ ಆದೇಶಿಸಬೇಕು, ಹಾಲಿ ಇರುವ ರ್ಯಾಂಕಿAಗ್ ವ್ಯವಸ್ಥೆಯನ್ನು ರದ್ದುಪಡಿಸಬೇಕು, ಮ್ಯುಟೇಷನ್ ಅವಧಿ ದಿನವನ್ನು ವಿಸ್ತರಿಸಬೇಕು, ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆಯನ್ನು ಒದಗಿಸಬೇಕು ಮುಂತಾದ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಅಲ್ಲದೇ ಈ ಎಲ್ಲಾ ಬೇಡಿಕೆಗಳು ಈಡೇರುವವರೆಗೆ ಎಲ್ಲಾ ಬಗೆಯ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಅನ್ನು ಸ್ಥಗಿತಗೊಳಿಸಿ, ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರವನ್ನು ರಾಜ್ಯವ್ಯಾಪಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಬೇಡಿಕೆಗಳನ್ನು ಈಡೇರಿಸಿ ಉತ್ತಮ ಮತ್ತುಗುಣಮಟ್ಟದ ರೀತಿಯಲ್ಲಿಸಾರ್ವ ನಿಕ ಮತ್ತುಸರ್ಕಾರಿ ಕೆಲಸಕಾರ್ಯಗಳನ್ನು ನಿರ್ವಹಿಸಲು ಅನುವುಮಾಡಿಕೊಡಬೇಕೆಂದು ಸಂಘವು ಆಗ್ರಹಿಸಿದೆ.
in