Share this news

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ಕೂಡ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ SP ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲಾಗಿದೆ. ಸಿಆರ್‌ಪಿಸಿ ಅಡಿಯಲ್ಲಿ ಎಫ್​ಐಆರ್​ ದಾಖಲಿಸಿ ಎಂದು ಕೋರ್ಟ್​ ಆದೇಶ ನೀಡಿತ್ತು. ಅದೇ ಕಾಯ್ದೆಯಡಿ ಇದೀಗ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲಾಗಿದೆ. 

ದೂರುದಾರ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ನ್ಯಾಯಾಲಯ ಸೂಚಿಸಿತ್ತು. ನ್ಯಾಯಾಲಯ ಸೂಚಿಸಿರುವ ಐಪಿಸಿ ಸೆಕ್ಷನ್ ಭ್ರಷ್ಟಾಚಾರ ತಡೆ ಕಾಯ್ದೆ, ಬೇನಾಮಿ ಆಸ್ತಿ ವಹಿವಾಟು ಕಾಯ್ದೆ, ಭೂ ಕಬಳಿಕೆ ನಿರ್ಬಂಧ ಕಾಯ್ದೆಯಡಿ ಲೋಕಾಯುಕ್ತ ಎಫ್‌ಐಆರ್ ದಾಖಲಿಸಿದೆ. ಸಿಎಂ ಸಿದ್ದರಾಮಯ್ಯ A 1 ಆರೋಪಿಯಾಗಿದ್ದರೆ, ಪತ್ನಿ ಪಾರ್ವತಿ A 2 ಆರೋಪಿಯಾಗಿದ್ದಾರೆ. ಇನ್ನು ಬಾಮೈದಾ ಮಲ್ಲಿಕಾರ್ಜುನ A 3, ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧದ ಎಫ್‌ಐಆರ್ ನಂಬರ್ 11/2024.

ಈಗಷ್ಟೇ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಮೈಸೂರು ಲೋಕಾಯುಕ್ತ ಪೊಲೀಸರು ಅಗತ್ಯವಿದ್ದಾಗ ಸಿಎಂ ಸಿದ್ದರಾಮಯ್ಯನವರನ್ನು ವಿಚಾರಣೆಗೆ ಬರುವಂತೆ ನೋಟಿಸ್ ನೀಡಬಹುದು. ಅಲ್ಲದೇ ಲೋಕಾಯುಕ್ತ ಬಂಧಿಸುವ ಅಧಿಕಾರವನ್ನೂ ಸಹ ಹೊಂದಿದೆ. ಹೀಗಾಗಿ ಬಂಧನ ಮಾಡಿದರೂ ಮಾಡಬಹುದು. ಇನ್ನು ಸಿಎಂ ಸಿದ್ದರಾಮಯ್ಯ ಕಾನೂನು ಪರಿಣಿತರ ಸಲಹೆ ಮೇರೆಗೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು.

                       in 

Leave a Reply

Your email address will not be published. Required fields are marked *