ಕಾರ್ಕಳ: ಕುಕ್ಕುಜೆ ಗ್ರಾಮದ ದೊಂಡೇರಂಗಡಿಯಲ್ಲಿ ಅನನ್ಯ ಫೋಟೋ ಸ್ಟುಡಿಯೋ ನಡೆಸಿಕೊಂಡಿದ್ದ ಕುಕ್ಕುಜೆ ಬಾವಲಿಮನೆ ನಿವಾಸಿ ಅಶೋಕ ಶೆಟ್ಟಿ ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಶುಕ್ರವಾರ ಮಧ್ಯಾಹ್ನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಮಧ್ಯಾಹ್ನ ಊಟಕ್ಕೆಂದು ಹೋದವರು ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ನಾನು ಮನೆಗೆ ಭಾರ,ಭೂಮಿಗೆ ಭಾರ ಎಂದು ಬರೆದಿದ್ದಾರೆ ಎನ್ನಲಾದ ಚೀಟಿ ದೊರೆತಿದೆ ಎಂದು ತಿಳಿದುಬಂದಿದೆ. ಸಾಮಾಜಿಕ ವಿಚಾರದಲ್ಲಿ ಕಾನೂನು ಹೋರಾಟ, ಆಸ್ತಿ ವಿಚಾರದಲ್ಲಿ ಕಾನೂನು ಸಂಘರ್ಷ ನಡೆಯುತ್ತಿತ್ತು ಎನ್ನಲಾಗಿದ್ದರೂ ಆತ್ಮಹತ್ಯೆಗೆ ನಿಖರ ಕಾರಣ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.
ಅಜೆಕಾರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ
in