Share this news

ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಇದರ ಸಹಯೋಗದಲ್ಲಿ ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಉಚಿತ ಹ್ರದ್ರೋಗ ತಪಾಸಣೆ ಶಿಬಿರವು ಅ.2 ರಂದು ಕಾರ್ಕಳದ ಪೆರ್ವಾಜೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ. ಸಂದೀಪ್ ಕುಡ್ವ ಕಾರ್ಯಕ್ರಮವನ್ನು ಉದ್ಘಾಟಿಸಿ ನಿತ್ಯ ವ್ಯಾಯಾಮದ ಜತೆಗೆ ಹಿತ ಮಿತವಾದ ಆಹಾರ ಸೇವನೆ ಹಾಗೂ ವಾಕಿಂಗ್ ಮೂಲಕ ನಮ್ಮ ಹೃದಯದ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಕಿವಿ ಮಾತು ಹೇಳಿದರು. ಕಾರ್ಯಕ್ರಮದಲ್ಲಿ ರೋಟರಿಯ ಮಾಜಿ ಜಿಲ್ಲಾ ಗವರ್ನರ್ ಡಾ ಭರತೇಶ್ ಆದಿರಾಜ್ ಭಾಗವಹಿಸಿ ಪ್ರಾಸ್ಥಾವಿಕವಾಗಿ ಮಾತಾಡಿದರು. ವೇದಿಕೆಯಲ್ಲಿ ಪರ್ವಾಜೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಆಸ್ಮಾ, ಡಾ ಟಿಎಂಎ ಪೈ ರೋಟರಿ ಆಸ್ಪತ್ರೆಯ ನಿರ್ವಾಹಕ ಅಸ್ಲಾನ್, ಡಾ.ರವಿ ಮತ್ತು ಡಾ.ರಿಷಬ್ ಉಪಸ್ಥಿತರಿದ್ದರು. ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷ ಉಪೇಂದ್ರ ವಾಗ್ಲೆ ಸ್ವಾಗತಿಸಿದರು, ಕಾರ್ಯದರ್ಶಿ ಪ್ರಶಾಂತ್ ಜೈನ್ ವಂದಿಸಿದರು. ಪ್ರಶಾಂತ ಬಿಳಿರಾಯ, ಶ್ರೀವರ್ಮ ಅಜ್ರಿ, ಸುರೇಂದ್ರ ನಾಯಕ್, ಗಣೇಶ ಬರ್ಲಾಯ, ಮಾಧವಿ ಕೆ ಮತ್ತು ಪ್ರಕಾಶ್ ಪೈ ಮೊದಲಾದ ರೋಟರಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *