ಕಾರ್ಕಳ: ಮನೆಯಲ್ಲಿ ಒಬ್ಬರೇ ಇದ್ದ ವೇಳೆ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಮಾಳದಲ್ಲಿ ಭಾನುವಾರ ನಡೆದಿದೆ.
ಮಾಳದ ನಾರಾಯಣ (65) ಮೃತಪಟ್ಟವರು. ಅವರ ಪುತ್ರ ದೀಕ್ಷಿತ್ ಕೆಲಸದ ನಿಮಿತ್ತ ಉಪ್ಪಿನಂಗಡಿಗೆ ಹೋಗಿದ್ದಾಗ ಮನೆಯಲ್ಲಿ ಒಬ್ಬರೇ ಇದ್ದ ನಾರಾಯಣ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು.
ಈ ಬಗ್ಗೆ ದೀಕ್ಷಿತ್ ದೊಡ್ಡಪನ ಮಗ ವಸಂತ ರವರು ಕರೆಮಾಡಿ ಆಸ್ಪತ್ರೆಗೆ ಅಸ್ವಸ್ಥಗೊಂಡಿದ್ದ ನಾರಾಯಣ ರನ್ನು ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆ ತಂದಿದ್ದು ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಫಾಧರ್ ಮುಲ್ಲಾರ್ ಆಸ್ಪತ್ರೆಗೆ ಕರೆತಂದಿರುವುದಾಗಿ ತಿಳಿಸಿದ್ದರು. ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ನಾರಾಯಣ ರವರು ಅದಾಗಲೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.