ಬೆಂಗಳೂರು: ಹರಿಯಾಣ ಹಾಗೂ ಜಮ್ಮು ಕಾಶ್ಮೀರ ವಿಧಾನಸಭೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು,ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು ಈ ಫಲಿತಾಂಶದಿಂದ ಬಿಜೆಪಿಗೆ ಕಪಾಳ ಮೋಕ್ಷ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶದಿAದ ಬಿಜೆಪಿ ಕಂಗೆಟ್ಟಿದೆ, ಚುನಾವಣೆ ಸಂದರ್ಭದಲ್ಲಿ 370 ವಿಧಿ ಬಗ್ಗೆ ಮಾತನಾಡಿದರು. ಕಾಶ್ಮೀರ ಫೈಲ್ಸ್ ಚಿತ್ರ ಪ್ರದರ್ಶನ ಮಾಡಿದ್ರೂ ಅದರಿಂದ ನಿರ್ಮಾಪಕ ಮತ್ತು ನಿರ್ದೇಶಕರಿಗೆ ಮಾತ್ರ ಲಾಭ ಆಗಿದ್ದು ಹೊರತು, ಇದರಿಂದ ಜಮ್ಮು ಕಾಶ್ಮೀರ ಜನರಿಗೆ ಏನು ಲಾಭ ಆಗಲಿಲ್ಲ. ಈಗ ಅಲ್ಲಿನ ಜನ ಒಂದು ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ.ದೇಶವನ್ನು ವಿಭಜಿಸುವ ನೀತಿ ಕೆಲಸ ಮಾಡಿಲ್ಲ ಎಂದು ಸಚಿವ ಪ್ರಿಯಾಂಕ್ ವಾಗ್ದಾಳಿ ನಡೆದಿದರು.
ಹರಿಯಾಣ ಚುನಾವಣಾ ಫಲಿತಾಂಶ ಅಂತಿಮ ಆಗಿಲ್ಲ. ನಮಗೆ ವಿಶ್ವಾಸ ಇದೆ ನಾವು ಮುನ್ನಡೆ ಸಾಧಿಸುತ್ತೇವೆ. ಕ್ರೀಡಾಪಟುಗಳ ಹೋರಾಟ ಸಾಕಷ್ಟು ಪ್ರಭಾವ ಬೀರಿದೆ. ಹಿಂದಿ ಪ್ರದೇಶಗಳಲ್ಲಿ ಫಲಿತಾಂಶವನ್ನು ಅಷ್ಟು ಸುಲಭದಲ್ಲಿ ಊಹಿಸುವುದು ಕಷ್ಟಕರ ಮೊನ್ನೆ ಉತ್ತರ ಪ್ರದೇಶದಲ್ಲಿ ಗೆಲ್ತಾರೆ ಅಂದ್ರು ಗೆದ್ದಿಲ್ಲ. ನನ್ನ ಮಾಹಿತಿ ಪ್ರಕಾರ ಹರಿಯಾಣದಲ್ಲಿ 53 ಸೀಟು ಬರುತ್ತದೆ ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.







