ಹೆಬ್ರಿ: ಮುನಿಯಾಲು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಮುಟ್ಲುಪಾಡಿ ಸತೀಶ್ ಶೆಟ್ಟಿ ಮುಂದಿನ 3 ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ.
ಮುನಿಯಾಲು ಮಾರಿಯಮ್ಮ ದೇವಸ್ಥಾನದ ವಠಾರದಲ್ಲಿ ಬಂಟರ ಸಂಘದ ಪದಾಧಿಕಾರಿಗಳ ಸಭೆ ನಡೆದಿದ್ದು, ಈ ಹಿಂದಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಅವಧಿ ಮೂರು ವರ್ಷ ಮುಗಿದಿದ್ದು ಸಮಿತಿಯ ಗೌರವಾಧ್ಯಕ್ಷರಾದ ವೈ ದಿವಾಕರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹೊಸ ಸಮಿತಿಯನ್ನು ರಚನೆ ಮಾಡಲಾಯಿತು. ಮುಂದಿನ ಮೂರು ವರ್ಷದ ಅವಧಿಗೆ ಅಧ್ಯಕ್ಷರಾಗಿ ಮುಟ್ಲುಪಾಡಿ ಸತೀಶ್ ಶೆಟ್ಟಿ,ಉಪಾಧ್ಯಕ್ಷರಾಗಿ ಸುರೇಂದ್ರ ಶೆಟ್ಟಿ ಮುನಿಯಾಲು, ಹಾಗೂ ಭಾರವಿ ಶೆಟ್ಟಿ ಪಡುಕುಡೂರು ,ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಶೆಟ್ಟಿ ಮುನಿಯಾಲ್ ,ಕಾರ್ಯದರ್ಶಿಯಾಗಿ ವಿನೋದ್ ರಾಜ್ ಶೆಟ್ಟಿ ಖಜಾಂಚಿಯಾಗಿ C.A. ನಿತೇಶ್ ಶೆಟ್ಟಿ , ಕ್ರೀಡಾ ಕಾರ್ಯದರ್ಶಿಯಾಗಿ ಸುಹಾಸ್ ಶೆಟ್ಟಿ ಮುಟ್ಲುಪಾಡಿ ಆಯ್ಕೆಯಾಗಿರುತ್ತಾರೆ. ಸಂಘದ ಅಭಿವೃದ್ಧಿಗೆ ಎಲ್ಲಾ ಸಮಾಜ ಬಾಂಧವರು ಸಹಕರಿಸಬೇಕಾಗಿ ಮುಟ್ಲುಪಾಡಿ ಸತೀಶ್ ಶೆಟ್ಟಿ ವಿನಂತಿಸಿಕೊಂಡಿದ್ದಾರೆ.