ಮಂಗಳೂರು : ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣದ ಕುರಿತಂತೆ ಪೊಲೀಸರು ಎ1 ಆರೋಪಿಯಾಗಿದ್ದ ರೆಹಮತ್ ಆಲಿಯಾಸ್ ಆಯೇಷಾಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಮೃತಪಟ್ಟ ಮುಮ್ತಾಜ್ ಆಲಿ ಸಹೋದರ ಹೈದರ್ ಅವರು ನೀಡಿದ್ದ ದೂರು ಆಧರಿಸಿ ನಿನ್ನೆ ಕಾವೂರು ಪೊಲೀಸ್ ಠಾಣೆಯಲ್ಲಿ ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶೋಯೆಬ್ ಹಾಗೂ ಸಿರಾಜ್ ವಿರುದ್ದ ಎಫ್‌ಐಆರ್ ದಾಖಲಾಗಿತ್ತು. ಘಟನೆ ಬಳಿಕ ಎ1 ಆರೋಪಿಯಾಗಿರುವ ಆಯೇಷಾ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಕೇರಳಕ್ಕೆ ಪರಾರಿಯಾಗಿದ್ದಳು. ಇದೀಗ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಮ್ತಾಜ್ ಅಲಿಗೆ ಆಯೇಷಾ ಹನಿಟ್ರಾö್ಯಪ್ ವಿಚಾರದಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದಳು ಎಂಬ ಆರೋಪ ಕೇಳಿ ಬಂದಿದ್ದು, ಈ ಬ್ಲಾಕ್ ಮೇಲ್ ಗೆ ಮಹಿಳೆಯ ಪತಿ ಶೋಯೆಬ್ ಕೂಡ ಸಾತ್ ನೀಡಿದ್ದಾನೆ ಎಂದು ತಿಳಿದುಬಂದಿದೆ. ಆಯೇಷಾಳ ಮಗುವಿನ ಜೊತೆಗೆ ಮುಮ್ತಾಜ್ ಅಲಿ ಆಟ ಆಡುತ್ತಿರುವ ವಿಡಿಯೋವನ್ನು ಆಯೇಷಾ ವಾಟ್ಸಪ್ ಸ್ಟೇಟಸ್ ಹಾಕಿದ್ದಳು. ಇದರಿಂದ ಮಮ್ತಾಜ್ ಅಲಿ ಮನೆಯಲ್ಲಿ ರಾತ್ರಿಯವರೆಗೂ ಗಲಾಟೆ ನಡೆದಿತ್ತು ಎನ್ನಲಾಗಿದೆ. ಆಯೇಷಾಳನ ಬ್ಲಾಕ್ ಮೇಲ್ ಗೆ ಹೆದರಿ ಮುಮ್ತಾಜ್ ಕೂಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗುತ್ತಿದೆ ಈ ಒಂದು ಪ್ರಕರಣಕ್ಕೆ ಸಂಬAಧಿಸಿದAತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್, ಮಮ್ತಾಜ್ ಅಲಿ ಅವರ ಆತ್ಮಹತ್ಯೆಗೆ ಹನಿಟ್ರ‍್ಯಾಪ್ ಕಾರಣ ಎಂದು ದೂರಿನಲ್ಲಿ ಅವರ ಸಹೋದರ ಉಲ್ಲೆಖಿಸಿದ್ದಾರೆ ಎಂದು ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್ ಅನುಪಮ್ ಅಗರವಾಲ್ ಮುಮ್ತಾಜ್ ಅಲಿ ಆತ್ಮಹತ್ಯೆಗೆ ಸಂಬAಧಪಟ್ಟ ಆರೋಪಿಗಳು ದೇಶ ಬಿಟ್ಟು ಹೋಗದಂತೆ ಎಲ್ ಓ ಸಿ ಜಾರಿ ಮಾಡಿದ್ದೇವೆ. ನಿನ್ನೆ ಮುಂಜಾನೆ ಮುಮ್ತಾಜ್ ಅಲಿ ನದಿಗೆ ಹಾರಿರುವ ಮಾಹಿತಿ ಬಂದಿತ್ತು. ಬೆಳಿಗ್ಗೆ 10 ಗಂಟೆಗೆ ಮುಮ್ತಾಜ್ ಅಲಿ ಮೃತದೇಹ ಸಿಕ್ಕಿದೆ.ಮುಮ್ತಾಜ್ ಅಲಿ ಸಹೋದರ ಕಾವೂರು ಠಾಣೆಗೆ ದೂರು ನೀಡಿದ್ದಾರೆ.ಹನಿ ಟ್ರ‍್ಯಾಪ್ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದಿದ್ದಾರೆ.














