ಕಾಸರಗೋಡು: ಕೇಂದ್ರ ಸರಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ ಲಕ್ಷಾಂತರ ರೂ. ವಂಚಿಸಿದ ಬಗ್ಗೆ ಡಿವೈಎಫ್‌ಐ ಮುಖಂಡೆಯೊಬ್ಬಳ ಬಗ್ಗೆ ದೂರು ದಾಖಲಾಗಿದೆ.
ನೌಕರಿ ಕೊಡಿಸುವುದಾಗಿ ಹೇಳಿ ವಂಚಿಸಿದ ಆರೋಪದ ಮೇಲೆ ಡಿವೈಎಫ್‌ಐ ಮುಖಂಡೆ, ಶಾಲಾ ಶಿಕ್ಷಕಿಯ ಮೇಲೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾಸರಗೋಡಿನ ಕಿದೂರಿನ ನಿಶ್ಮಿತಾ ಶೆಟ್ಟಿ (24) ಎಂಬವರ ದೂರಿನ ಆಧಾರದ ಮೇಲೆ ಪೊಲೀಸರು ದೂರು ದಾಖಲಿಸಿದ್ದಾರೆ.
ಬಿಜೆಪಿ-ಆರೆಸ್ಸೆಸ್ ಸಿದ್ಧಾಂತದ ವಿರುದ್ಧ ಸದಾ ಟೀಕೆ, ವ್ಯಂಗ್ಯವಾಡುತ್ತಿದ್ದ ಸಚಿತಾ ರೈ ಮೇಲೆ ವಂಚನೆ ಪ್ರಕರಣ ದಾಖಲಾಗಿದೆ. ಕೇಂದ್ರ ಸಚಿವಾಲಯದ ಅಧೀನದಲ್ಲಿರುವ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ಇನ್ಸ್‌ಟಿಟ್ಯೂಟ್‌ನಲ್ಲಿ ಹುದ್ದೆಯ ಭರವಸೆ ನೀಡಿ ಯುವತಿಗೆ 15 ಲಕ್ಷ ರೂ. ವಂಚಿಸಿದ್ದಾರೆ ಎಂದು ದೂರಲಾಗಿದೆ.
ಐಪಿಸಿಯ ಸೆಕ್ಷನ್ 420 ಕಲಂನಡಿ ಸಚಿತಾ ರೈ ವಿರುದ್ಧ ಪ್ರಕರಣ ದಾಖಲಾಗಿದೆ. ಆಕೆ ಸುಮಾರು 2 ಕೋಟಿ ರೂ. ಉದ್ಯೋಗಾಕಾಂಕ್ಷಿಗಳಿಂದ ಸಂಗ್ರಹಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.