Share this news

ಉಡುಪಿ: ಶಾರದೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಹಲವೆಡೆಗಳಲ್ಲಿ ಅಕ್ಟೋಬರ್ 12 ಹಾಗೂ 14 ರಂದು ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಅ.12ರಂದು ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರೂರು, ಯಡ್ತರೆ, ಬೈಂದೂರು ಮತ್ತು ಬಿಜೂರು ಗ್ರಾಮ ಹಾಗೂ ಕುಂದಾಪುರ ನಗರ ಠಾಣಾ ವ್ಯಾಪ್ತಿಯ ಕಸಬಾ, ವಡೇರಹೋಬಳಿ, ಹಂಗಳೂರು ಮತ್ತು ಕೋಟೇಶ್ವರ ಗ್ರಾಮಗಳಲ್ಲಿ ಹಾಗೂ ಅಕ್ಟೋಬರ್ 14 ರಂದು ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗಂಗೊಳ್ಳಿ ಮತ್ತು ಗುಜ್ಜಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 6 ಗಂಟೆಯಿoದ ರಾತ್ರಿ 12 ರವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ

 

Leave a Reply

Your email address will not be published. Required fields are marked *