ಕೋಲಾರ: ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ ಕೂಡ ಒಂದು. ಅನ್ನಭಾಗ್ಯ ಯೋಜನೆಗೆ ಸರ್ಕಾರ ಎರಡು ತಿಂಗಳಿನಿAದ ಡಿಬಿಟಿ ಹಣ ಕೊಟ್ಟಿರಲಿಲ್ಲ. ಹೀಗಾಗಿ ಬಿಪಿಎಲ್ ಫಲಾನುಭವಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ಈ ವಿಚಾರವಾಗಿ ಆಹಾರ ಸಚಿವ ಮುನಿಯಪ್ಪ ಪ್ರತಿಕ್ರಿಯಿಸಿದ್ದು, ಪ್ರತಿ ತಿಂಗಳು 10ರಂದು ಹಣ ಬಿಡುಗಡೆಯಾಗುತ್ತಿತ್ತು. ಆದರೆ ಸರ್ವರ್ ಸಮಸ್ಯೆಯಿಂದ ಹಣ ಬಿಡುಗಡೆ ವಿಳಂಬವಾಗಿದೆ. ಬಾಕಿ ಹಣ ಮುಂದಿನ ವಾರ ಬಿಡುಗಡೆಯಾಗಲಿದೆ ಎಂದು ಭರವಸೆ ನೀಡಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ ಕರ್ನಾಟಕ ಸರ್ಕಾರದ ಪಾಲಿನ ಉಚಿತ 5 ಕೆಜಿ ಅಕ್ಕಿ ನೀಡುವ ವಿಚಾರಕ್ಕೆ ಕೇಂದ್ರ ಮತ್ತು ರಾಜ್ಯದ ಮಧ್ಯೆ ಜಟಾಪಟಿ ನಡೆಯುತ್ತಿತ್ತು. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದಿದ್ದರೂ ಖರೀದಿಸುತ್ತಿಲ್ಲವೆಂಬ ಆರೋಪ ಕೂಡ ಕೇಳಿಬಂದಿತ್ತು. ಇದೆಲ್ಲದರ ಮಧ್ಯೆ 5ಕೆಜಿ ಅಕ್ಕಿ ಬದಲಾಗಿ ಹಣ ನೀಡುವುದನ್ನು ಮುಂದುವರೆಸುವುದಾಗಿ ಇತ್ತೀಚೆಗೆ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿತ್ತು.
ಇಷ್ಟಾದರೂ ಕೂಡ ಸರ್ಕಾರ ಎರಡು ತಿಂಗಳಿನಿAದ ಡಿಬಿಟಿ ಹಣ ಹಾಕಿರಲಿಲ್ಲ. ಬಿಪಿಎಲ್ ಕಾರ್ಡ್ದಾರ ಕುಟುಂಬಗಳ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲಾಗಿ ಸರ್ಕಾರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುತ್ತಿತ್ತು. ಪ್ರತಿ ಕೆಜಿ ಅಕ್ಕಿಗೆ ತಲಾ 34ರೂ.ನಂತೆ ಒಟ್ಟು 5 ಕೆಜಿ ಅಕ್ಕಿಗೆ 170ರೂ ನೀಡಲಾಗುತ್ತಿತ್ತು. ಅದರಂತೆ ಫಲಾನುಭವಿಗಳ ಖಾತೆಗೆ ಹಣ ಕೂಡ ಜಮಾವಣೆಯಾಗುತ್ತಿತ್ತು. ಆದರೆ, ಕಳೆದ ಎರಡು ತಿಂಗಳಿAದ ಯಾವುದೇ ಹಣ ಪಾವತಿ ಆಗಿಲ್ಲ. ಹೀಗಾಗಿ ಫಲಾನುಭವಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.













