ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಬೆಂಗಳೂರಿನ 82ನೇ ಸಿಟಿ ಸಿವಿಲ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬರೋಬ್ಬರಿ ಮೂರು ತಿಂಗಳ ಬಳಿಕ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಕೋರ್ಟ್ ಕೊನೆಗೂ ಷರತ್ತು ಬದ್ದ ಜಾಮೀನು ನೀಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬಿ.ನಾಗೇಂದ್ರ ಅವರನ್ನು ಬಂಧಿಸಿದ್ದರು.ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಒಂದು ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಇಡಿ ಅಧಿಕಾರಿಗಳು ಕೋರ್ಟ್ ಗೆ ಸಲ್ಲಿಸಿದ್ದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಇದಾದ ಬಳಿಕ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಈ ಜಾಮೀನಿನ ಮೂಲಕ ಮಾಜಿ ಸಚಿವ ನಾಗೇಂದ್ರ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ