Share this news

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬAಧ ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಆರ್‌ಟಿಐ ಕಾರ್ಯಕರ್ತ ಗಂಗರಾಜು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಮುಡಾ ಕೇಸ್‌ನಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ ಮಾಡಲಾಗುತ್ತಿದೆ. ಜೊತೆಗೆ ಸರ್ಚ್ ವಾರಂಟ್ ನೀಡಿ ವಾಪಸ್ ಪಡೆಯಲಾಗಿದೆ ಎಂದು ಆರೋಪಿಸಿ ಅವರು ಲೋಕಾಯುಕ್ತ ಹಿರಿಯ ಅಧಿಕಾರಿಗಳು, ಸಚಿವ ಭೈರತಿ ಸುರೇಶ್, ವಿಶೇಷ ಕರ್ತವ್ಯಧಿಕಾರಿ ಮಾರುತಿ ಬಗಲಿ, ಹಿಂದಿನ ಮುಡಾ ಆಯುಕ್ತರಾದ ನಟೇಶ್, ದಿನೇಶ್ ವಿರುದ್ಧ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ.

ಮುಡಾ ಹಗರಣ ಕುರಿತು ಲೋಕಾಯುಕ್ತ ದಾಖಲೆ ಸಂಗ್ರಹ ಮಾಡಿತ್ತು. ತನಿಖಾಧಿಕಾರಿಗಳು ಕೂಡಾ 1 ಸಾವಿರ ಪುಟಗಳ ದಾಖಲೆ ಸಂಗ್ರಹ ಮಾಡಿದ್ದರು. ಲೋಕಾಯುಕ್ತ ಇನ್ಸ್ಪೆಕ್ಟರ್ ರವಿಕುಮಾರ್ ತಂಡ ಸಾಕ್ಷಿ ಸಂಗ್ರಹಿಸಿತ್ತು. ಬಳಿಕ ಸರ್ಚ್ ವಾರಂಟ್ ನೀಡಲು ಅಂದಿನ ಎಸ್‌ಪಿಗೆ ಮನವಿ ಸಲ್ಲಿಸಲಾಗಿತ್ತು. ಅವರು ಉದ್ದೇಶ ಪೂರ್ವಕವಾಗಿ ವಿಳಂಬ ಮಾಡಿ ಸರ್ಚ್ ವಾರಂಟ್ ನೀಡಿದ್ದರು. ಕೆಲವು ಅಧಿಕಾರಿಗಳಿಂದ ಸರ್ಕಾರಕ್ಕೆ ಈ ಮಾಹಿತಿ ಸೋರಿಕೆಯಾಗಿತ್ತು. ಈ ಮೂಲಕ ಭೈರತಿ ಕಡತಗಳನ್ನು ಬೆಂಗಳೂರಿಗೆ ತರಿಸಿಕೊಂಡಿದ್ದಾರೆ. ಅಧಿಕಾರಿಗಳೂ ಶಾಮೀಲಾಗಿದ್ದಾರೆ ಎಂದು ದೂರಿನಲ್ಲಿ ಗಂಗರಾಜು ಉಲ್ಲೇಖಿಸಿದ್ದಾರೆ.

ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ಮುಡಾ ಹಗರಣದ ತನಿಖೆ ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪಗಳಿವೆ. ಅದರೊಂದಿಗೆ ಇದೀಗ ರಾಜ್ಯಪಾಲರಿಗೆ ಮತ್ತೆ ದೂರು ಸಲ್ಲಿಕೆಯಾಗಿರುವುದು ಕುತೂಹಲ ಮೂಡಿಸಿದೆ.

Leave a Reply

Your email address will not be published. Required fields are marked *