Share this news

ಕಾರ್ಕಳ: ಈ ಬಾರಿಯ ದೀಪಾವಳಿಗೆ ಚೇತನಾ ವಿಶೇಷ ಶಾಲೆಯ ವಿದ್ಯಾರ್ಥಿಗಳು ಬಣ್ಣ ಬಣ್ಣದ ಹಾಗೂ ವಿವಿಧ ಆಕಾರಗಳೊಂದಿಗೆ ಸಿದ್ಧಗೊಳಿಸಿದ ಮಣ್ಣಿನ ಹಣತೆಗಳನ್ನು ಶಾಲಾ ದಾನಿಗಳು ಹಾಗೂ ಹಿತೈಷಿಗಳು ಆದ ಕಾರ್ಕಳ ಕಮಲಾಕ್ಷ ಕಾಮತ್‌ರವರು ದೀಪ ಬೆಳಗಿಸಿ ಉದ್ಘಾಟಿಸಿ, ವಿಶೇಷಚೇತನರ ಶ್ರೇಯೋಭಿವೃದ್ಧಿಗಾಗಿ ಇಂತಹ ಒಂದು ಒಳ್ಳೆಯ ಕಾರ್ಯಯೋಜನೆಯನ್ನು ಹಮ್ಮಿಕೊಂಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ. ಗಣಪತಿ ಪೈ, ಕಾರ್ಯದರ್ಶಿ ರಘುನಾಥ್ ಶೆಟ್ಟಿ, ಕೋಶಾಧಿಕಾರಿ ವಿಜಯ್ ಕುಮಾರ್ ಅತಿಥಿ ಗಣ್ಯರು, ಶಾಲಾ ಹಿತೈಷಿಗಳು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಸ್ವಾವಲಂಬಿಯಾಗಿ ಬದುಕಲು ನಡೆಸುವ ಪ್ರಯತ್ನದಲ್ಲಿ ಇದೀಗ ಕೇವಲ ಹತ್ತು ರೂಪಾಯಿಂದ ಪ್ರಾರಂಭಗೊಳ್ಳುವ ಈ ಬಣ್ಣದ ಹಣತೆಗಳನ್ನು ಶಾಲೆಗೆ ಭೇಟಿ ನೀಡಿ ನಿಮ್ಮ ಆಯ್ಕೆಯ ಹಣತೆಗಳನ್ನು ಖರೀದಿಸಿ ಪ್ರೋತ್ಸಾಹಿಸುವಂತೆ ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ವಿನಂತಿ ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9480531469.

Leave a Reply

Your email address will not be published. Required fields are marked *