ಮಂಗಳೂರು:ಹಿಂದೂ ಹುಡುಗಿಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹಿಂದೂ ಜಾಗರಣಾ ವೇದಿಕೆ ಮುಖಂಡ ಸಚಿನ್ ವಲಳಂಬೆ ದೂರಿನಡಿ ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕು ಬೆಳ್ಳಾರೆ ಠಾಣೆಯಲ್ಲಿ ಎಫ್ಐಆರ್ ಹಾಕಲಾಗಿದ್ದು, ಬಿಎನ್ಎಸ್ ಕಾಯ್ದೆ 79ರಡಿ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹೇಳಿಕೆ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಮೊದಲು ದೂರು ನೀಡಿದರೂ ಪ್ರಕರಣ ದಾಖಲಿಸಿರಲಿಲ್ಲ. ಹೀಗಾಗಿ ಹಿಂದೂ ಜಾಗರಣ ವೇದಿಕೆ ನಾಳೆ ಪ್ರತಿಭಟನೆಗೆ ಎಚ್ಚರಿಕೆ ನೀಡಿತ್ತು. ಪ್ರತಿಭಟನೆಯ ಬಿಸಿ ಬೆನ್ನಲ್ಲೇ ಇದೀಗ ಎಫ್ಐಆರ್ ದಾಖಲಿಸಲಾಗಿದೆ.
ಪಂಜ ಉಪವಲಯದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹಿಂದೂ ಹೆಣ್ಮಕ್ಕಳ ಬಗ್ಗೆ ನಾಲಗೆ ಹರಿಬಿಟ್ಟಿದ್ದರು. ಸುರೇಶ್ ಎಂಬ ಹಿಂದೂ ಕಾರ್ಯಕರ್ತನ ಜೊತೆ ದೂರವಾಣಿ ಸಂಭಾಷಣೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಸರ್ಕಾರಿ ಅಧಿಕಾರಿಯ ಆಡಿಯೋ ಕರಾವಳಿಯಲ್ಲಿ ಭಾರಿ ವಿವಾದ ಸೃಷ್ಟಿಸಿತ್ತು.
‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಲಕ್ಷ ಬಿಲ್ಲವ ಹುಡುಗಿಯರು ಸೂ…. ಆಗಿದ್ದಾರೆ’ ‘ಇದಕ್ಕೆ ನನ್ನ ಬಳಿ 10,000 ದಾಖಲೆ ಕೂಡ ಇದೆ’ ‘ಹಿಂದುತ್ವದ ಹುಡುಗರು ಸೂ…ನ್ನಾಗಿ ಮಾಡಿದ್ದಾರೆ’ ‘ಬಿಲ್ಲವ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ’ ‘ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದ್ದರು’ ಎಂದು ಫೋನ್‌ನಲ್ಲಿ ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು.